ಬಿಎಂಟಿಸಿ ಬಸ್ – ಬೈಕ್ ನಡುವೆ ಡಿಕ್ಕಿ ಬೈಕ್ ಸವಾರ ಸಾವು

ಬಿಎಂಟಿಸಿ ಬಸ್ – ಬೈಕ್ ನಡುವೆ ಡಿಕ್ಕಿ ಬೈಕ್ ಸವಾರ ಸಾವು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಬಸ್ಸ್‌ಗಳು ಕಿಲ್ಲರ್‌ ಬಸ್ಸ್ಗಳಾಗಿವೆ. ಇಂದು ಬೆಳಗ್ಗೆ ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ಸರ್ಕಲ್​​ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ನಟರಾಜ್ (50) ಮೃತಪಟ್ಟಿದ್ದಾರೆ.

ಮೃತ ನಟರಾಜ್ ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗ್ರಾಮದವರು ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಹೊರಟ್ಟಿದ್ದ ಬಸ್​​ ಹಾಗೂ ಬಾಶೆಟ್ಟಿಹಳ್ಳಿ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್​​​​ನ ಮುಂಭಾಗದಲ್ಲಿ ಬೈಕ್ ಸಿಲುಕಿಕೊಂಡಿತ್ತು.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆ ಸಾಗಿಲಾಗಿತ್ತು. ಆದರೆ ತಲೆಗೆ ತೀರ್ವವಾದ ಪೆಟ್ಟು ಬಿದ್ದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಫ್ರೆಶ್ ನ್ಯೂಸ್

Latest Posts

Featured Videos