ಆಟೋ-ಕೆಎಸ್ಆರ್ಟಿಸಿ ಬಸ್ ಡಿಕ್ಕಿ, 4 ಸಾವು

ಆಟೋ-ಕೆಎಸ್ಆರ್ಟಿಸಿ ಬಸ್ ಡಿಕ್ಕಿ, 4 ಸಾವು

ತುಮಕೂರು, ಜು. 4 : ಇಂದು ಬೆಳಗ್ಗೆ ತುಮಕೂರು ಗ್ರಾಮಾಂತರದ ಮಲ್ಲಸಂದ್ರ ಬಳಿ ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್, ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ 4 ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರು ಗುಬ್ಬಿ ತಾಲೂಕಿನ ಮತ್ತಿಘಟ್ಟಿ ನಿವಾಸಿಗಳಾಗಿದ್ದು, ಅವರ ಹೆಸರು ಇನ್ನೂ ತಿಳಿದುಬಂದಿಲ್ಲ. ಗಾಯಗೊಂಡ ಇಬ್ಬರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಈ ಸಂದರ್ಭದಲ್ಲಿ ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಡಿಕ್ಕಿಯ ರಸಭಕ್ಕೆ ನಜ್ಜುಗುಜ್ಜಾಗಿದ್ದ ಆಟೋದಲ್ಲಿ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಸ್ಥಳೀಯರು ಮತ್ತು ಪೊಲೀಸರು ಹೊರತೆಗೆಯಲು ಹರಸಾಹಸಪಟ್ಟರು. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos