ಆರೋಪಿ: ಬಂಧಿಸಲು ಆಗ್ರಹ

ಆರೋಪಿ: ಬಂಧಿಸಲು ಆಗ್ರಹ

ತುರುವೇಕೆರೆ: ತಾಲೂಕಿನ ಮುನಿಯೂರು ಗ್ರಾಮದಲ್ಲಿ ಸೋಮಶೇಖರ್ ಎಂಬುವವನಿಗೆ ಮಚ್ಚಿನಿಂದ ಹಲ್ಲೆ ಮಾಡಿರುವ ಆರೋಪಿ ಪುನಿತ್ ಎಂಬುವವನನ್ನು ಕೂಡಲೇ ಬಂಧಿಸುವAತೆ ಆಗ್ರಹಿಸಿ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ತಾಲೂಕು ಜೆಡಿಎಸ್‌ನಿಂದ ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ತಾರತಮ್ಯ ಮಾಡುತ್ತಿರುವುದು ಸರಿಯಲ್ಲ. ಶಾಸಕ ಮಸಾಲ ಜಯರಾಮ್ ಆರೋಪಿಯನ್ನು ತಮ್ಮ ಕಾರ್ಖಾನೆಯಲ್ಲಿ ಅಡಗಿಸಿಟ್ಟಿದ್ದಾರೆ ಎನ್ನುವ ಅನುಮಾನ ಕಾಡುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos