ಅನಧಿಕೃತ ಕಟ್ಟಡ, ಬಡಾವಣೆ ವಿರುದ್ಧ ಕ್ರಮ

ಅನಧಿಕೃತ ಕಟ್ಟಡ, ಬಡಾವಣೆ ವಿರುದ್ಧ ಕ್ರಮ

ಚಾಮರಾಜನಗರ: ನಗರಾಭಿವೃದ್ದಿ ಪ್ರಾಧಿಕಾರದಿಂದ ಅನುಮೋದನೆ ಪಡೆಯದೇ ನಿರ್ಮಾಣವಾಗುವ ಅನಧಿಕೃತ ಕಟ್ಟಡಗಳು ಹಾಗೂ ಬಡಾವಣೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದೆ ಆಗಬಹುದಾದ ಕಾನೂನಾತ್ಮಕ ಸಮಸ್ಯೆಗಳಿಗೆ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ’ ಎಂದು ಚಾಮರಾಜನಗರ–ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ (ಚುಡಾ) ಅಧ್ಯಕ್ಷ ಪಿ.ಬಿ.ಶಾಂತಮೂರ್ತಿ ಎಚ್ಚರಿಸಿದರು.
ಪ್ರಾಧಿಕಾರ ವ್ಯಾಪ್ತಿಯಲ್ಲಿನ ಅನಧಿಕೃತ ಬಡಾವಣೆಗಳು, ಅಕ್ರಮ ಕಟ್ಟಡಗಳ ಸಂಬಂಧ ವಹಿಸಬೇಕಿರುವ ಕ್ರಮಗಳ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಅವರು, ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಚಾಮರಾಜನಗರ ತಾಲ್ಲೂಕಿನ ಏಳು ಗ್ರಾಮ ಪಂಚಾಯಿತಿಗಳಿಗೆ ಸೇರಿಸ ೨೦ ಗ್ರಾಮಗಳು ಬರಲಿವೆ. ನಗರಸಭೆ ವ್ಯಾಪ್ತಿಯಲ್ಲಿ ಏಳು ಗ್ರಾಮಗಳು ವ್ಯಾಪ್ತಿಗೆ ಬರಲಿವೆ. ಈ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಚಟುವಟಿಕೆಗಳು ನಡೆಸುವುದಿದ್ದರೂ, ಪ್ರಾಧಿಕಾರದಿಂದ ಅನುಮೋದನೆ ಪಡೆದುಕೊಳ್ಳುವುದು ಕಡ್ಡಾಯ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos