ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ

ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ

ಮಂಡ್ಯ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ರಂಗೆರಿದ್ದು ರಾಜ್ಯದಲ್ಲೇ ಅಭ್ಯರ್ಥಿಗಳು ಭರ್ಜರಿ ಮತಯಾಚಿಸುತ್ತಿದ್ದಾರೆ. ಕಳೆದ ಬಾರಿ ಬಾರಿ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಕ್ಷೇತ್ರ ಈ ಬಾರಿಯೂ ಅಷ್ಟೇ ಮಟ್ಟಕ್ಕೆ ಕಾರನವಾಗಿದೆ.  ಮಂಡ್ಯ ಲೋಕಸಭೆ ಮಾಜಿ ಸಂಸದೆಯಾಗಿದ್ದಂತಹ ಸುಮಲತಾ ಅಂಬರೀಶ್ ಅವರು  ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ಆಗದೆ ಸುಮಲತಾ ಅವರು ಕೊನೆಗೂ ಕಣದಿಂದ ಹಿಂದೆ ಸರಿದಿದ್ದರು,  ಇದರಿಂದ ಬಿಜೆಪಿ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿದ್ದಾರೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಅವರು ಸ್ಪರ್ಧಿಸುತ್ತಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಬಿಜೆಪಿ ಸೇರಿರುವ ಸಂಸದೆ ಸುಮಲತಾರನ್ನು ‘ಅಮ್ಮಾ’ ಎಂದೇ ಕರೆಯುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಮುಂದಾಗಿದ್ದು ಕುತೂಹಲ ಸೃಷ್ಟಿಸಿದೆ. ಈ ಮಧ್ಯೆ, ಮೈತ್ರಿ ಅಭ್ಯರ್ಥಿ ಜೆಡಿಎಸ್ ಪಕ್ಷದ ಹೆಚ್​ಡಿ ಕುಮಾರಸ್ವಾಮಿ ಪರ ಸುಮಲತಾ  ಇನ್ನೂ ಪ್ರಚಾರದ ಅಖಾಡಕ್ಕಿಲ್ಲ. ಬಿಜೆಪಿಯ ರಾಜ್ಯ, ಕೇಂದ್ರ ನಾಯಕರು ಹೇಳಿದರೆ ಕುಮಾರಸ್ವಾಮಿ ಪರ ಪ್ರಚಾರ ಮಾಡುವುದಾಗಿ ಸುಮಲತಾ ಹೇಳಿದ್ದರು. ಆದರೆ ಈವರೆಗೆ ಪ್ರಚಾರ ಮಾಡದೆ ಮೌನವಾಗಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರಕ್ಕೆ ಮುಂದಾಗಿದ್ದಾರೆ.

ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ಯಶ್ ಜತೆ ಜೋಡೆತ್ತಿನಂತೆ ನಿಂತಿದ್ದ ದರ್ಶನ್ ಸುಮಲತಾ ಪರ ಬೆವರು ಸುರಿಸಿ ಮಂಡ್ಯದಲ್ಲಿ ಪ್ರಚಾರ ಮಾಡಿದ್ದರು. ಆದರೆ, ಈಗ ಸುಮಲತಾ ಬಿಜೆಪಿಯಲ್ಲಿದ್ದರೂ ದರ್ಶನ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋಗುತ್ತಿರುವುದು ಸಾಕಷ್ಟು ಅಚ್ಚರಿ ಮತ್ತು ಚರ್ಚೆಗೆ ಗ್ರಾಸವಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos