ನಟ ದರ್ಶನ್ ಆಸ್ಪತ್ರೆಗೆ ದಾಖಲು!

ನಟ ದರ್ಶನ್ ಆಸ್ಪತ್ರೆಗೆ ದಾಖಲು!

ಮೈಸೂರು, ಮಾ. 04: ಕನ್ನಡದಲ್ಲಿ ತನ್ನದೇ ಆದ ರೀತಿಯ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ ಡಿ ಬಾಸ್ ಎಂದು ಕರೆಸಿಕೊಂಡಿರುವ ದರ್ಶನ್ ಅವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೌದು, ಕಳೆದ ಹಲವು ದಿನಗಳಿಂದ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದ ಛಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೂಲಕ ಗ್ಯಾಸ್ಟ್ರಿಕ್ ಸಮಸ್ಯೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ನಟ ದರ್ಶನ್ ತೂಗುದೀಪ್ ಅವರಿಗೆ, ಕಳೆದ ಹಲವು ದಿನಗಳಿಂದ ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತಿತ್ತು. ಇಂತಹ ಸಮಸ್ಯೆಯ ನಡುವೆಯೂ ಹಲವು ಶೂಟಿಂಗ್ ಗಳಲ್ಲಿ ಭಾಗವಹಿಸಿ, ಶೂಟಿಂಗ್ ಮುಂದುವರೆಸಿದ್ದರು. ಆದ್ರೇ ಇಂದು ನಟ ದರ್ಶನ್ ಅವರಿಗೆ ಗ್ಯಾಸ್ಟ್ರೀಕ್ ಸಮಸ್ಯೆ ತೀವ್ರವಾಗಿ ಕಾಡತೊಗಿತ್ತು.

ಇದೇ ಕಾರಣದಿಂದಾಗಿ ಮೈಸೂರಿನ ಅಪೊಲೋ ಆಸ್ಪತ್ರೆಗೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಚಿಕಿತ್ಸೆಗಾಗಿ ದಾಖಾಲಗಿದ್ದಾರೆ. ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಅವರನ್ನು, ತಜ್ಞವೈದ್ಯರು ಪರೀಕ್ಷೆಗೆ ಒಳಪಡಿಸಿದ್ದು, ಸಮಸ್ಯೆಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos