ಬೆಂಗಳೂರು: ನಮ್ಮ ಸ್ಯಾಂಡಲ್ ನಟಿಯಾದ ಅಮೂಲ್ಯ ರವರು ಬಾಲ ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ನಾಯಕಿ ಆಗಿ ನಟಿಸಿದ ‘ಚೆಲುವಿನ ಚಿತ್ತಾರ’ ಸಿನಿಮಾ ಹಿಟ್ ಆಯಿತು. ಅಮೂಲ್ಯ ರವರು ಅತ್ಯಂತ ಬೇಡಿಕೆಯ ನಟಿಯಾಗಿದ್ದರು. ಮದುವೆಯಾದ ಬಳಿಕ ಅವರು ನಟನೆಯಿಂದ ಸ್ವಲ್ಪ ದೂರ ಉಳಿದುಕೊಂಡಿದ್ದಾರೆ. ನಟಿ ಅಮೂಲ್ಯ ಅವರಿಗೆ ಇಬ್ಬರು ಅವಳಿ ಮಕ್ಕಳಿದ್ದಾರೆ, ಅವರಿಗೆ ಅಥರ್ವ್ ಹಾಗೂ ಆಧವ್ ಎಂದು ಹೆಸರಿಟ್ಟಿದ್ದಾರೆ.
ಇಂದು ಕೃಷ್ಣ ಜನ್ಮಾಷ್ಟಮಿ. ಈ ಹಬ್ಬದಂದು ಮಕ್ಕಳಿಗೆ ಕೃಷ್ಣನ ವೇಷ ತೊಡಿಸಿ ಫೋಟೋ ಕ್ಲಿಕ್ ಮಾಡಲಾಗುತ್ತದೆ. ಅದೇ ರೀತಿ ಅಮೂಲ್ಯ ಅವರು ಮಕ್ಕಳಿಗೆ ಕೃಷ್ಣನ ವೇಷ ಹಾಕಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿದೆ.
ಕೊಳಲು ಹಿಡಿದು ಅಥರ್ವ್ ಹಾಗೂ ಆಧವ್ ಕುಳಿತಿದ್ದಾರೆ. ಇವರ ಜೊತೆಗೆ ಅಮೂಲ್ಯ ಕೂಡ ಇದ್ದಾರೆ. ಗೋವಿನ ಜೊತೆಯೂ ಫೋಟೋಗಳಿವೆ. ಸದ್ಯ ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ.