ಕಮಲವನ್ನರಳಿಸುವ ಮೊದಲ ಪ್ರಚಾರದಲ್ಲಿ ನಟಿ ಖುಷ್ಬು

ಕಮಲವನ್ನರಳಿಸುವ ಮೊದಲ ಪ್ರಚಾರದಲ್ಲಿ ನಟಿ ಖುಷ್ಬು

ಬೆಂಗಳೂರು: ಕಳೆದ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡಿದ್ದಂತ ನಟಿ ಖುಷ್ಬೂ, ಇದೀಗ ರಾಜ್ಯದಲ್ಲಿನ ಉಪ ಚುನಾವಣೆಯ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ಆರಂಭಕವಾಗಿ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಲಗ್ಗೆರೆಯಲ್ಲಿ ಪ್ರಚಾರ ನಡೆಸಿದ್ದಾರೆ.

ಉಪಚುನಾವಣೆಯಲ್ಲಿ ಕಾವು ಬಿಸಿ ಏರಿದೆ. ಶಿರಾ, ರಾಜರಾಜೇಶ್ವರಿ ನಗರ ಕ್ಷೇತ್ರಗಳಲ್ಲಿ ಗೆಲುವಿಗಾಗಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಇತ್ತ ಬಿಜೆಪಿ ಸ್ಟಾರ್ ಪ್ರಚಾರಕ್ಕೆ ಅಣಿಯಾಗಿದ್ದು, ನಟಿ ಖುಷ್ಬು ಬಿಜೆಪಿ ಅಭ್ಯರ್ಥಿ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.  ಬಿಜೆಪಿಯ ಅಭ್ಯರ್ಥಿ ಮುನಿರತ್ನಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos