ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ

ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಅದಿತಿ ಪ್ರಭುದೇವ ಯುಗಾದಿ ಹಬ್ಬದ ಈ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳಿಗೆ ಖುಷಿ ವಿಷಯವನ್ನು ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಅದಿತಿ ಪ್ರಭುದೇವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಕನ್ನಡ ಚಿತ್ರರಂಗದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ತಾಯಿಯಾಗಿದ್ದಾರೆ. ಈ ವಿಚಾರವನ್ನು ಸ್ವತಃ ಅತಿದಿ ಪ್ರಭುದೇವ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಹೆಣ್ಣು ಮಗುವಿನ ಫೋಟೋವನ್ನು ಅದಿತಿ ಅವರು ಶೇರ್​ ಮಾಡಿಕೊಂಡಿದ್ದಾರೆ. ಆದರೆ ಇದರಲ್ಲಿ ಅವರು ಮಗುವಿನ ಮುಖ ತೋರಿಸಿಲ್ಲ. ಯಶಸ್​ ಪಾಟ್ಲಾ ಹಾಗೂ ಅದಿತಿ ಪ್ರಭುದೇವ ದಂಪತಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭಾಶಯ ಕೋರುತ್ತಿದ್ದಾರೆ.

ಅದಿತಿ ಪ್ರಭುದೇವ ಅವರಿಗೆ ಏಪ್ರಿಲ್​ 4ರಂದು ಹೆಣ್ಣು ಮಗು ಜನಿಸಿದೆ. ‘4.4.2024 ನಮ್ಮನೆ ಮಹಾಲಕ್ಷ್ಮಿ. ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು’ ಎಂಬ ಕ್ಯಾಪ್ಷನ್​ನೊಂದಿಗೆ ಅದಿತಿ ಪ್ರಭುದೇವ ಅವರು ಖುಷಿಯ ಸಮಾಚಾರ ತಿಳಿಸಿದ್ದಾರೆ. ‘ನನ್ನ ಜೀವದ ಗೆಳತಿ ಅದಿತಿ. ನಿನ್ನ ಹಾಗೆಯೇ ನಮ್ಮ ಮಗಳು’ ಎಂದು ಯಶಸ್​ ಪಾಟ್ಲಾ ಅವರು ಈ ಪೋಸ್ಟ್​ಗೆ ಕಮೆಂಟ್​ ಮಾಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos