ದೊಡ್ಡಣ್ಣಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ದೊಡ್ಡಣ್ಣಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡದ ಹಿರಿಯ ಹಾಸ್ಯನಟ ದೊಡ್ಡಣ್ಣ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಬುಧವಾರ ದೊಡ್ಡಣ್ಣ ಅವರ ಹೃದಯಬಡಿತದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸದ್ಯ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎನ್ನಲಾಗುತ್ತಿದೆ. ಇಂದು ಶಾಶ್ವತ ಪೇಸ್ ಮೇಕರ್ ಅಳವಡಿಸುವ ಕಾರ್ಯ ನಡೆದಿದ್ದು, ಸದ್ಯ ಅವರು ಐಸಿಯುಲ್ಲಿದ್ದಾರೆ. ಚಿಕಿತ್ಸೆಗೆ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ. ಮೂರು ದಿನಗಳ ಕಾಲ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ನಂತರ ಡಿಸ್ಚಾರ್ಜ್ ಮಾಡಲಾಗುತ್ತದೆ. ಎಂದು ವೈದ್ಯರು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos