ಪೌಷ್ಟಿಕ ಆಹಾರ ಸೇವನೆಗೆ ಸಲಹೆ

ಪೌಷ್ಟಿಕ ಆಹಾರ ಸೇವನೆಗೆ ಸಲಹೆ

ಹುಳಿಯಾರು: ರಕ್ತ ಹೀನತೆ ಹಾಗೂ ಅಪೌಷ್ಟಿಕತೆ ತಡೆಗಟ್ಟಲು ಪೌಷ್ಟಿಕ ಆಹಾರ ಸೇವಿಸುವಂತೆ ಹಿರಿಯ ಆರೋಗ್ಯ ಸಹಾಯಕ ಶ್ರೀನಿವಾಸ್ ಆಚಾರ್ ಅವರು ತಿಳಿಸಿದರು.
ಹುಳಿಯಾರು ಹೋಬಳಿಯ ದೊಡ್ಡಬಿದರೆಯಲ್ಲಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪೋಷಣ್ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗರ್ಭಿಣಿ, ಬಾಣಂತಿ, ಮಕ್ಕಳು, ಹದಿಹರೆಯದವರು, ಹೆಚ್ಚಾಗಿ ಹಸಿರು ಸೊಪ್ಪು, ತರಕಾರಿಗಳು, ಹಣ್ಣುಗಳು, ಮೊಟ್ಟೆ, ಹಾಲು, ಮೊಳಕೆ ಕಾಳುಗಳ ಸೇವನೆ ಮಾಡಲು ಸಲಹೆ ನೀಡಿದರು.
ಆರೋಗ್ಯ ಇಲಾಖೆಯಿಂದ ಎನ್.ಎಚ್.ಎಂ ಕಾರ್ಯಕ್ರಮದ ಅಡಿಯಲ್ಲಿ ಗರ್ಭಿಣಿ ನೋಂದಣಿ, ಆರೋಗ್ಯ ತಪಾಸಣೆ, ಐ.ಎಫ್.ಎ ಮತ್ತು ಕ್ಯಾಲ್ಸಿಯಂ ಮಾತ್ರೆಗಳ ಉಚಿತವಾಗಿ ವಿತರಣೆ, ಹೆರಿಗೆಗಾಗಿ ಉಚಿತ ವಾಹನ ೧೦೮ ರ ಸೌಲಭ್ಯ, ಮಕ್ಕಳಿಗೆ ರೋಗ ನಿರೋಧಕ ಲಸಿಕೆಯನ್ನು ಉಚಿತವಾಗಿ ನೀಡುವುದು ಇದರ ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos