ವಿಶ್ವಕಪ್: ಶ್ರೀಲಂಕಾ ವಿರುದ್ದ ಅಫ್ಘಾನಿಸ್ತಾನ್ ಗೆ ಜಯ

ವಿಶ್ವಕಪ್: ಶ್ರೀಲಂಕಾ ವಿರುದ್ದ ಅಫ್ಘಾನಿಸ್ತಾನ್ ಗೆ ಜಯ

ಬೆಂಗಳೂರು: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಆಫ್ಘಾನಿಸ್ತಾನದ ಹೋರಾಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇಂಗ್ಲೆಂಡ್, ಪಾಕಿಸ್ತಾನದಂತ ಬಲಿಷ್ಠ ತಂಡವನ್ನೇ ಮಣಿಸಿದ ಆಫ್ಘಾನಿಸ್ತಾನ. ಏಕದಿನ ವಿಶ್ವಕಪ್ನ 30ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ದ ಅಫ್ಘಾನಿಸ್ತಾನ್ ಜಯ ಸಾಧಿಸಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡದ ನಾಯಕ ಹಶ್ಮತ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 49.3 ಓವರ್ಗಳಲ್ಲಿ 241 ರನ್ಗಳಿಗೆ ಆಲೌಟ್ ಆಯಿತು. 242 ರನ್ಗಳ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 45.2 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಆಫ್ಘಾನಿಸ್ತಾನ ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಜಿಗಿದಿದೆ. ಇಷ್ಟೇ ಅಲ್ಲ ಆಫ್ಘಾನಿಸ್ತಾನದ ಸೆಮಿಫೈನಲ್ ಅವಕಾಶ ಮತ್ತಷ್ಟು ತೆರೆದುಕೊಂಡಿದೆ.

ಉಭಯ ತಂಡಗಳು ಏಕದಿನ ಕ್ರಿಕೆಟ್ನಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ 7 ಮ್ಯಾಚ್ಗಳಲ್ಲಿ ಶ್ರೀಲಂಕಾ ಗೆದ್ದರೆ, ಅಫ್ಘಾನಿಸ್ತಾನ್ 4 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯ ಕಾರಣಾಂತರಗಳಿಂದ ರದ್ದಾಗಿತ್ತು.

ಫ್ರೆಶ್ ನ್ಯೂಸ್

Latest Posts

Featured Videos