ಆ. 29 ಕ್ಕೆ ‘ಪೈಲ್ವಾನ್’

ಆ. 29 ಕ್ಕೆ ‘ಪೈಲ್ವಾನ್’

ಬೆಂಗಳೂರು, ಜು.16 : ನಟ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ಪೈಲ್ವಾನ್’ ಸಿನಿಮಾ ಬಿಡುಗಡೆ ದಿನಾಂಕ ನಿರ್ದೇಶಕ ಕೃಷ್ಟ ಅಧಿಕೃತವಾಗಿ ತಿಳಿಸಿದ್ದಾರೆ.
ಪೈಲ್ವಾನ್ ಚಿತ್ರದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಆಗಸ್ಟ್ 29ಕ್ಕೆ ಸಿನಿಮಾ ಚಿತ್ರಮಂದಿರಕ್ಕೆ ಬರಲಿದೆ ಎಂದು ಹೇಳಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ಬಹುಭಾಷೆಯಲ್ಲಿ ‘ಪೈಲ್ವಾನ್’ ಸಿನಿಮಾ ಬರುತ್ತಿದೆ. ಆ. 29ಕ್ಕೆ ಸಿನಿಮಾ ರಿಲೀಸ್ ಪಕ್ಕಾ ಆಗಿದೆ. ಸೆನ್ಸಾರ್ ಮಂಡಳಿಯಿಂದ ಗ್ರೀನ್ ಸಿಗ್ನಲ್ ಪಡೆಯುತ್ತಿದ್ದಂತೆ ಮತ್ತೊಮ್ಮೆ ಅಧಿಕೃತ ದಿನಾಂಕ ಹೇಳಲಾಗುತ್ತದೆ. ಸಿನಿಮಾ ನಟ ಸುದೀಪ್, ಕಬೀರ್ ಸಿಂಗ್ ದುಹಾನ್, ಆಕಾಂಕ್ಷ ಸಿಂಗ್ ಮತ್ತು ಸುನೀಲ್ ಶೆಟ್ಟಿ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ಈ ಹಿಂದೆ ‘ಪೈಲ್ವಾನ್’ ಸಿನಿಮಾ ಆಗಸ್ಟ್ 8 ಅಂದರೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿತ್ತು. ಆದರೆ ಅದೇ ದಿನ ನಟ ದರ್ಶನ್ ಅಭಿನಯದ ‘ಕುರುಕ್ಷೇತ್ರ’ ಸಿನಿಮಾ ರಿಲೀಸ್ ಮಾಡುವುದಾಗಿ ನಿರ್ಮಾಪಕ ಮುನಿರತ್ನ ಅವರು ಹೇಳಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos