ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ರಾಜೀನಾಮೆ ಇಲ್ಲ

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ರಾಜೀನಾಮೆ ಇಲ್ಲ

ನವದೆಹಲಿಮೇ. 25, ನ್ಯೂಸ್ಎಕ್ಸ್ ಪ್ರೆಸ್‍: ಲೋಕಸಭಾ ಚುನಾವಣೆ ಮತ ಎಣಿಕೆ ಮುಗಿಯುತ್ತಿದ್ದಂತೆ ಕಾಂಗ್ರೆಸ್​ ಶಾಕ್​ ಗೆ ಒಳಗಾಗಿದೆ.  ಈ ಬಾರಿ ಬರೀ 52 ಸೀಟುಗಳು ಮಾತ್ರ ಲಭಿಸಿ ತೀವ್ರ ಮುಜುಗರಕ್ಕೀಡಾಗಿದೆ.

ಅದರ ಬೆನ್ನಲ್ಲೇ ಸದ್ಯ ಪಕ್ಷವನ್ನು ಮುನ್ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಾರೆ ಎಂದು ದೊಡ್ಡಮಟ್ಟದಲ್ಲಿ ವರದಿಯಾಗಿತ್ತು. ಆದರೆ, ಆ ಸುದ್ದಿ ಸುಳ್ಳು. ರಾಹುಲ್​ ಗಾಂಧಿ ರಾಜೀನಾಮೆಯನ್ನು ಪಕ್ಷ ಕೇಳಿಲ್ಲ. ಅವರು ಅಧ್ಯಕ್ಷ ಸ್ಥಾನ ತೊರೆಯುವುದಿಲ್ಲ ಎಂದು ಪಕ್ಷವೇ ತಿಳಿಸಿದೆ.

ಹಾಗೊಮ್ಮೆ ರಾಹುಲ್​ ಗಾಂಧಿ ಏನಾದರೂ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರೂ ಪಕ್ಷ ಅದನ್ನು ತಿರಸ್ಕರಿಸುತ್ತಿತ್ತು. ಏಕೆಂದರೆ ಅವರು ಚುನಾವಣಾ ಕಾರ್ಯತಂತ್ರ ಹಾಗೂ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಸಮಿತಿಗೆ ಸಂಪೂರ್ಣ ಮಾಹಿತಿ ನೀಡಿದ್ದರು ಎಂದು ಕಾಂಗ್ರೆಸ್​ ಮುಖಂಡರು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos