ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ

ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ

ಬೆಂಗಳೂರು, ಏ. 24, ನ್ಯೂಸ್ ಎಕ್ಸ್ ಪ್ರೆಸ್: 2019ರ ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ 61 ಅಕೌಂಟ್ಸ್ ಎಕ್ಸಿಕ್ಯುಟಿವ್ ಮತ್ತು ಅಕೌಂಟ್ಸ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ ಸೈಟ್‌ ನಲ್ಲಿ ಪ್ರಕಟಣೆ ಹೊರಡಿಸಿದೆ. ಪ್ರಸ್ತುತ ಹುದ್ದೆಗಳು ಮುಂಬೈ, ದೆಹಲಿ, ಕೊಲ್ಕತ್ತ, ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರು ಕಡೆಗಳಲ್ಲಿ ಖಾಲಿ ಇದ್ದು ಆಸಕ್ತರು ಅಧಿಕೃತ ವೆಬ್‌ ಸೈಟ್‌ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ವೆಬ್ ಸೈಟ್ ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದೆಹಲಿ ಮತ್ತು ಮುಂಬೈ ನಲ್ಲಿ ಮೇ 3,4 ಮತ್ತು ಮೇ 10,11 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ12:30ರ ವರೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಅಕೌಂಟ್ಸ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಸಿಎ/ಐಸಿಡಬ್ಲ್ಯೂಎ/ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರುವುದರ ಜೊತೆಗೆ 2 ವರ್ಷದ ಅನುಭವ ಮತ್ತು ಅಕೌಂಟ್ಸ್ ಕ್ಲರ್ಕ್ ಹುದ್ದೆಗಳಿಗೆ ಸಿಎ ಇಂಟರ್/ ಐಸಿಡಬ್ಲ್ಯೂಎ ಇಂಟರ್ / ಬಿ.ಕಾಂ ಜೊತೆಗೆ 2 ವರ್ಷದ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನದ ವಿವರ: ಅಕೌಂಟ್ಸ್ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,200/-ರೂ ಮತ್ತು ಅಕೌಂಟ್ಸ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 45,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು 1,000/-ರೂ ಅರ್ಜಿ ಶುಲ್ಕ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿವರ: ಅಭ್ಯರ್ಥಿಗಳು ಏರ್ ಇಂಡಿಯಾ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್  ರಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ ಅಗತ್ಯ ದಾಖಲೆಗಳೊಂದಿಗೆ ದೆಹಲಿ ಮತ್ತು ಮುಂಬೈ ನಲ್ಲಿ ಮೇ 3,4 ಮತ್ತು ಮೇ 10,11 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ12:30ರ ವರೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

 

ಫ್ರೆಶ್ ನ್ಯೂಸ್

Latest Posts

Featured Videos