ಐಶ್ವರ್ಯ ಜೊತೆ ಅನುಷ್ಕಾ ಶೆಟ್ಟಿ ನಟನೆ

ಐಶ್ವರ್ಯ ಜೊತೆ ಅನುಷ್ಕಾ ಶೆಟ್ಟಿ ನಟನೆ

ನವದೆಹಲಿ, ಏ. 22 ನ್ಯೂಸ್ ಎಕ್ಸ್ ಪ್ರೆಸ್: ಬಾಹುಬಲಿ ಖ್ಯಾತಿಯ ಸೌತ್ ಇಂಡಸ್ಟ್ರಿ ಸುಂದರಿ ಅನುಷ್ಕಾ ಶೆಟ್ಟಿ ಭಾಗಮತಿ ಚಿತ್ರದ ನಂತರ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಇದೀಗ ಬ್ರೇಕಿಂಗ್ ನ್ಯೂಸ್ ಒಂದನ್ನು ಕೊಟ್ಟಿದ್ದಾರೆ.

ಅನುಷ್ಕಾ ಶೆಟ್ಟಿ ಹಾಗೂ ಐಶ್ವರ್ಯ ರೈ ಒಟ್ಟಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈ 2 ನಟಿಯರನ್ನು ಒಟ್ಟಾಗಿ ತೆರೆ ಮೇಲೆ ತರಲಿದ್ದಾರೆ ಖ್ಯಾತ ನಿರ್ದೇಶಕ ಮಣಿರತ್ನಂ. ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಚಿತ್ರದಲ್ಲಿ ಇಬ್ಬರೂ ನಟಿಸಲಿದ್ದಾರೆ.

ಪೊನ್ನಿಯಿನ್ ಸೆಲ್ವನ್ ಚಿತ್ರದಲ್ಲಿ ಐಶ್ವರ್ಯಾ ರೈ ವಿಲನ್ ಪಾತ್ರದಲ್ಲಿ ನಟಿಸುತ್ತಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಅನುಷ್ಕಾ ಶೆಟ್ಟಿಗೆ ಐಶ್ವರ್ಯಾ ರೈ ವಿಲನ್ ಆಗಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos