ಬೆಳಗಾವಿ, ನ. 28 : ಉಪ ಚುನಾವಣೆ ನಡೆಯುತ್ತಿರುವ ಅಥಣಿ, ಗೋಕಾಕ ಮತ್ತು ಕಾಗವಾಡ ವಿಧಾನಸಭಾ ಕ್ಷೇತ್ರಗಳಲ್ಲಿ ಡಿಸೆಂಬರ್ 5ರಂದು ಮತದಾನ ಹಾಗೂ ಡಿ. 9ರಂದು ಮತ ಎಣಿಕೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.
ಮೂರು ಕ್ಷೇತ್ರಗಳಿಗೆ ಡಿ. 5ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 3ರ ಬೆಳಗ್ಗೆ 6ರಿಂದ ಡಿಸೆಂಬರ್ 5ರ ಮಧ್ಯರಾತ್ರಿವರೆಗೆ ಹಾಗೂ ಡಿ. 9ರಂದು ಮತ ಎಣಿಕೆ ನಡೆಯಲಿರುವುದರಿಂದ ಡಿ. 8ರ ರಾತ್ರಿ 12ರಿಂದ ಡಿ. 9ರ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.