ಅಳೆದು ತೂಗಿ ಖಾತೆ ಹಂಚಿಕೆ ಮಾಡಲಾಗಿದೆ: ಡಿ.ವಿ.ಸದಾನಂದಗೌಡ

ಅಳೆದು ತೂಗಿ ಖಾತೆ ಹಂಚಿಕೆ ಮಾಡಲಾಗಿದೆ: ಡಿ.ವಿ.ಸದಾನಂದಗೌಡ

ನವದೆಹಲಿ, ಆ. 27: ಮುಖ್ಯಮಂತ್ರಿ ಯಡಿಯೂರಪ್ಪನವರು ಹೈಕಮಾಂಡ್ ಸೂಚನೆಯಂತೆ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಅಳೆದು ತೂಗಿ ಸಚಿವರಿಗೆ ಖಾತೆ ಹಂಚಲಾಗಿದೆ. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಈ ಸಚಿವ ಸಂಪುಟ ಒಂದು ರೀತಿ ಹಳೇ ಬೇರು, ಹೊಸ ಚಿಗುರು ಎಂಬಂತೆ ಇದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆಯಂತೆ ಸಚಿವ ಸಂಪುಟ ವಿಸ್ತರಣೆಯಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಉಂಟಾಗಿದ್ದ ಗೊಂದಲ ಈಗ ಸೃಷ್ಟಿಯಾಗುವುದಿಲ್ಲ ಎಂದು ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos