ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ   

ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ   

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದಿನ ದಿನಕ್ಕೆ ರಾಜ್ಯದ ನದಿಗಳ ನೀರಿನ ಮಟ್ಟ ಇಳಿಯತಿದ್ದು ಪ್ರಮುಖ ನದಿಗಳಾದ ಕಾವೇರಿ, ಮಹದಾಯಿ, ಕಳಸಾ ಬಂಡೂರಿ ವಿಚಾರವಾಗಿ ಸಿ.ಎಂ. ಸಿದ್ಧರಾಮಯ್ಯ ಇಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ದೂರವಾಣಿಯ ಕರೆ ಮೂಲಕ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿ.ಎಂ. ಡಿ.ವಿ.ಸದಾನಂದಗೌಡ, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಗೆ ಆಹ್ವಾನ ನೀಡಲಾಗಿದೆ,  ಸರ್ವಪಕ್ಷ ಸಭೆಗೆ ಬಿಜೆಪಿಯ ಮೂವರು ಮಾಜಿ ಸಿಎಂಗಳಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರು ನಿವಾಸಕ್ಕೆ ತೆರಳಿ ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಿದ್ದಾರೆ.

ಪ್ರತಿ ವರ್ಷದಂತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಆಡಳಿತ ಸರಕಾರಗಳು  ಮತ್ತು ಪ್ರತಿಪಕ್ಷಗಳ  ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಲಿವೆ, ರಾಜ್ಯದ ಹಲವೆಡೆ ಈ ವಿಚಾರಕ್ಕೆ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಮತ್ತೊಂದೆಡೆ ಕೆಆರ್ಎಸ್ ಡ್ಯಾಂ, ನೀರಿನ ಮಟ್ಟ ಕುಸಿಯುತ್ತಿದ್ದು ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು ಹೊಸ ಪೀಠ ರಚಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಇನ್ನು ಕಾವೇರಿ, ಮಹದಾಯಿ, ಕಳಸಾ ಬಂಡೂರಿ ವಿಚಾರವಾಗಿ ಇಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ.

ನೂತನ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿಗಳಿಗೆ ಹಣ ಜೋಡಿಸಲಾಗದೆ ಪರಿಶಿಷ್ಟ ಮತ್ತು ಪರಿಶಿಷ್ಟ ಪಂಗಡದ [sc/st] ಹಣ ಗ್ಯಾರಂಟಿಗಳಿಗೆ ಬಳಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟಣೆ ನಡೆಸಿದ ಬೆನ್ನಲ್ಲೆ ನೂತನ ಸರ್ಕಾರಕ್ಕೆ ಕಾವೇರಿ ನದಿಯ ನೀರು ತಮಿಳು ನಾಡಿಗೆ ಬಿಡುವುದಿಲ್ಲ ಎಂದು ಸರ್ಕಾರ ಸುಪ್ರಿಂ ಕೋರ್ಟ್ ಗೆ ಮೊರೆ ಹೋಗಿರುವ ನಿಟ್ಟಿನಲ್ಲಿ ರಾಜ್ಯದ ಜನತೆಗೆ ತಲೆ ಬಿಸಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ.

ಫ್ರೆಶ್ ನ್ಯೂಸ್

Latest Posts

Featured Videos