ಎಲ್ಲಾ ಶಾಲೆಗಳಲ್ಲಿ ಶೌಚಾಲಯ

 ಎಲ್ಲಾ ಶಾಲೆಗಳಲ್ಲಿ ಶೌಚಾಲಯ

ಬೆಂಗಳೂರು, ಜು . 16 :  ರಾಜ್ಯದ ಎಲ್ಲ ಶಾಲೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ನರೇಗಾ ಯೋಜನೆಯಡಿಯಲ್ಲಿ ಅಭಿಯಾನ ಕೈಗೊಂಡು ಅ.1ಕ್ಕೆ ಎಲ್ಲ ಸರಕಾರಿ ಶಾಲೆಗಳಲ್ಲೂ ಕಡ್ಡಾಯವಾಗಿ ಶೌಚಾಲಯ ಹೊಂದಿರಬೇಕು ಎಂದು ನಿರ್ದೇಶನ ನೀಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

2018ರ ವಿಧಾನಸಭಾ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಸರಕಾರಿ (ಮತಗಟ್ಟೆಗಳೆಂದು ಗುರುತಿಸಿರುವ) ಶಾಲೆಗಳಲ್ಲಿ ಅಗತ್ಯ ಮೂಲ ಸೌಕರ್ಯಗಳಲ್ಲಿ ಒಂದಾದ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿತ್ತು. ಹಾಗೆಯೇ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿಗಾಗಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಬಂಧಪಟ್ಟ ಶಾಲೆಗಳ ಮುಖ್ಯೋಪಾಧ್ಯಾಯರ ಖಾತೆಗೆ ಹಣ ಜಮಾ ಮಾಡುತ್ತಾರೆ.

 

ಫ್ರೆಶ್ ನ್ಯೂಸ್

Latest Posts

Featured Videos