ಕಾನೂನು ಉಲ್ಲಂಘಿಸುವವರಿಗೆ ರಕ್ಷಣೆ ನೀಡಲು ಸದಾ ಸಿದ್ದ: ಬಿಜೆಪಿ

ಕಾನೂನು ಉಲ್ಲಂಘಿಸುವವರಿಗೆ ರಕ್ಷಣೆ ನೀಡಲು ಸದಾ ಸಿದ್ದ: ಬಿಜೆಪಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಒಂದಲ್ಲ ಒಂದು ಆರೋಪ ಮಾಡುತ್ತಿದ್ದು ಇದೀಗ ನಾಗಮಂಗಲ ಕೋಮುಗಲಭೆ ಮತ್ತು ದಾವಣಗೆರೆಯಲ್ಲಿ ನಡೆದ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿಯು ವ್ಯಂಗ್ಯವಾಗಿ ಟೀಕಿಸಿದೆ.

ಈ ಕುರಿತಂತೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ನನ್ನು ಹಾಕಿರುವ ಬಿಜೆಪಿಯು, ಕಾನೂನು ಉಲ್ಲಂಘಿಸುವವರಿಗೆ ರಕ್ಷಣೆ ನೀಡಲು ಸದಾ ‘ಸಿದ್ದ’ ಸರ್ಕಾರ ಎಂದು ವ್ಯಂಗ್ಯಚಿತ್ರವೊಂದನ್ನು ಪ್ರಕಟಿಸಿ ಟೀಕಿಸಿದೆ. ಇದನ್ನೂ ಓದಿ: ಬಿಜೆಪಿ ಶಾಸಕ ಮತ್ತೆ ಅರೆಸ್ಟ್​

ನಾಗಮಂಗಲದಲ್ಲಿ ಬಿಜೆಪಿ ನಾಯಕರ ವಿರುದ್ಧ ಎಫ್​​ಐಆರ್. ನಾವು ಬೆಂಕಿ ಹಚ್ಚಿದವರನ್ನು ಬಂಧಿಸಲ್ಲ, ಅದನ್ನು ವಿರೋಧಿಸುವವರನ್ನು ಮಾತ್ರ ಬಂಧಿಸೋದು’ ಎಂದು ಸಿಎಂ ಸಿದ್ದರಾಮಯ್ಯ ಹೇಳುವ ಬರಹದೊಂದಿಗೆ ವ್ಯಂಗ್ಯಚಿತ್ರ ರಚಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos