ಅಂಬೇಡ್ಕರ್ ತತ್ವಾದರ್ಶ ಅಳವಡಿಸಿಕೊಳ್ಳಲು ಕರೆ

ಅಂಬೇಡ್ಕರ್ ತತ್ವಾದರ್ಶ ಅಳವಡಿಸಿಕೊಳ್ಳಲು ಕರೆ

ಕೊರಟಗೆರೆ: ಬಿ.ಆರ್.ಅಂಬೇಡ್ಕರ್‌ರವರ ತತ್ವಾದರ್ಶಗಳನ್ನ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಜೀವನ ಸಾಗಿಸಿದರೆ ಅದೇ ಅವರಿಗೆ ನೀಡುವ ಉಡುಗರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ಹೆಚ್.ಸಿ. ದೊಡ್ಡಯ್ಯ ತಿಳಿಸಿದರು.
ಪಟ್ಟಣದ ಪಪಂ ಮುಂದೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಏರ್ಪಡಿಸಲಾಗಿದ್ದ ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿಯ ಪೋಸ್ಟರ್ ಬಿಡುಗಡೆ ಗೊಳಿಸಿ ಮಾತನಾಡಿದರು.
ಅಂಬೇಡ್ಕರ್‌ರವರ ಕುರಿತಾದ ಜೀವನ ಚರಿತ್ರೆಯನ್ನ ಧಾರವಾಹಿ ರೂಪದಲ್ಲಿ ಝೀ ಕನ್ನಡ ವಾಹಿನಿ ಪ್ರಸಾರ ಮಾಡುತ್ತಿದೆ. ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಈ ಧಾರಾವಾಹಿಯನ್ನ ತೋರಿಸಿ ಅವರ ತತ್ವಾದರ್ಶಗಳನ್ನ ಜೀವನ ಮೌಲ್ಯಗಳನ್ನ ಮಕ್ಕಳ ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಸಾಧನೆ ಮಾಡುವಂತಾಗಬೇಕು ಎಂದು ಹೇಳಿದರು.
ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್‌ರವರು ದೇಶ ಸೇರಿದಂತೆ ಹೊರ ದೇಶಗಳು ಒಪ್ಪುವಂತ ಸಂವಿಧಾನ ನೀಡಿದ್ದಾರೆ. ಸಂವಿಧಾನ ಶಿಲ್ಪಿಯ ಜೀವನಾಧಾರಿತ ಮಹಾನಾಯಕ ಧಾರಾವಾಹಿಗೆ ನಾಡಿನೆಲ್ಲೆಡೆ ಅಭೂತಪೂರ್ವ ಜನಬೆಂಬಲ ಸಿಗುತ್ತಿದ್ದು, ಇಂತಹ ಮಹಾನ್ ನಾಯಕನ ಧಾರಾವಾಹಿಯನ್ನ ಝೀ ವಾಹಿನಿ ಪ್ರಸಾರ ಮಾಡಿದ್ದಕ್ಕೆ ಧನ್ಯವಾದವನ್ನ ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos