ಅಭಿಷೇಕ್ ಅಂಬರೀಶ್ ಬಿಚ್ಚಿಟ್ಟ ‘ಅಂಬರೀಶ್ ಅಂತ್ಯಕ್ರಿಯೆ’ ರಹಸ್ಯ..!

ಅಭಿಷೇಕ್ ಅಂಬರೀಶ್ ಬಿಚ್ಚಿಟ್ಟ ‘ಅಂಬರೀಶ್ ಅಂತ್ಯಕ್ರಿಯೆ’ ರಹಸ್ಯ..!

ಮಂಡ್ಯ, ಏ. 16, ನ್ಯೂಸ್ ಎಕ್ಸ್ ಪ್ರೆಸ್: ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್‌ 18 ರಂದು ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಈ ಹಿನ್ನಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಇಂದು ಮಂಡ್ಯದ ಸಿಲ್ವರ್‌ ಜ್ಯೂಬಿಲಿ ಕ್ರೀಡಾಂಗಣದಲ್ಲಿ ಸ್ವಾಭಿಮಾನ ಸಮಾವೇಶ ನಡೆಸುತ್ತಿದ್ದಾರೆ. ಇದರಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟರಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ರಾಕಿಂಗ್‌ ಸ್ಟಾರ್‌ ಯಶ್‌ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದಾರೆ. ಸಹಸ್ರಾರು ಸಂಖ್ಯೆಯಲ್ಲಿ ನೆರೆದಿರುವ ಜನಸ್ತೋಮ ಸುಮಲತಾ ಅಂಬರೀಶ್‌ ಅವರ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ. ಈ ಸಮಾವೇಶದಲ್ಲಿ ಮಾತನಾಡಿರುವ ರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರ ಪುತ್ರ ಅಭಿಶೇಕ್‌ ಮಹತ್ವದ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ಅಂಬರೀಶ್‌ ಅವರ ಪಾರ್ಥಿವ ಶರೀರವನ್ನು ಅವರ ಕುಟುಂಬ ಸದಸ್ಯರ ವಿರೋಧದ ಮಧ್ಯೆಯೂ ತಾವು ಮಂಡ್ಯಕ್ಕೆ ತರಲು ವ್ಯವಸ್ಥೆ ಮಾಡಿದ್ದಾಗಿ ಹೇಳಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ವೇದಿಕೆಯಿಂದಲೇ ಪ್ರತ್ಯುತ್ತರಿಸಿದ ಅಭಿಶೇಕ್.‌ ಅಂದು ರಾತ್ರಿ ವಿಕ್ರಂ ಆಸ್ಪತ್ರೆಯಲ್ಲಿ ಮಂಡ್ಯಕ್ಕೆ ತಂದೆಯವರನ್ನು ಕರೆದುಕೊಂಡು ಹೋಗೋಣಾ ಎಂದು ಹೇಳಿದ್ದೇ ನಾನು. ಇದು ನಮ್ಮಪ್ಪಾನಾಣೆಗೂ ಸತ್ಯ ಎಂದು ಹೇಳಿದ್ದಾರೆ. ನಾನು ಇದನ್ನು ಹೇಳಿದ ವೇಳೆ ಕುಮಾರಸ್ವಾಮಿಯವರು, ಇದು ಸಾಧ್ಯವಾಗದ ಕೆಲಸ. ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಹೇಳಿದ್ದರು. ಬೆಂಗಳೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ಅಂಬರೀಶ್‌ ಅವರ ಪಾರ್ಥಿವ ಶರೀರವನ್ನು ಇರಿಸಿದ್ದ ಸಂದರ್ಭದಲ್ಲೂ ನನ್ನ ಬಳಿ ಬಂದ ಕುಮಾರಸ್ವಾಮಿಯವರು, ಮಂಡ್ಯಕ್ಕೆ ಪಾರ್ಥಿವ ಶರೀರ ತೆಗೆದುಕೊಂಡು ಹೋಗುವುದು ಸಾಧ್ಯವಿಲ್ಲ ಎಂದಿದ್ದರು. ಆದರೆ ಈ ಮಾತನ್ನು ಕೇಳಿಸಿಕೊಂಡ ಮಂಡ್ಯದ ಗಣ್ಯರೊಬ್ಬರು ಅಂಬರೀಶ್‌ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋಗಲೇಬೇಕು ಎಂದು ಪಟ್ಟು ಹಿಡಿದಿದ್ದರು ಎಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos