ಪಾಕ್ ಗೆ ಅಮೆರಿಕಾ ಶಾಕ್ !

ಪಾಕ್ ಗೆ ಅಮೆರಿಕಾ ಶಾಕ್ !

ವಾಷಿಂಗ್ಟನ್, ಅ. 22 : ದೊಡ್ಡಣ ಎಂದು ಕರೆಸಿಕೊಳ್ಳವ ಅಮೆರಿಕಾ ಪಾಕ್ ಗೆ ಬಿಗ್ ಆಫರ್ ನೀಡಿದೆ. ಕೂಡಲೇ ಪಾಕಿಸ್ತಾನ ಇಸ್ಲಾಮಾಬಾದ್ ಭಯೋತ್ಪಾದಕರು ಮತ್ತು ಭಯೋತ್ಪಾದನಾ ಸಂಘಟನೆಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಿ ಗಡಿಯಾಚೆ ನಡೆಯುತ್ತಿರುವ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದೆ.
ಪಾಕಿಸ್ತಾನ ಭಯೋತ್ಪಾದನೆ ಸಂಘಟನೆಗಳಿಗೆ ಬೆಂಬಲ ನೀಡುವುದನ್ನು ತಕ್ಷಣವೇ ನಿಲ್ಲಿಸಿ ಭಾರತದ ಜೊತೆ ಮಾತುಕತೆ ನಡೆಸಲು ಒಪ್ಪಿದರೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಅಮೆರಿಕ ಹೇಳಿದೆ. 1972ರ ಶೀಮ್ಲಾ ಒಪ್ಪಂದದಂತೆ ಭಾರತ ಮತ್ತು ಪಾಕಿಸ್ತಾನ ನೇರ ಮಾತುಕತೆ ಮೂಲಕ ಸದ್ಯ ಉಭಯ ರಾಷ್ಟ್ರಗಳ ನಡುವೆ ಉಂಟಾಗಿರುವ ಬಿಕ್ಕಟ್ಟನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಮುಂದಾದರೆ ಅಮೆರಿಕ ಸಹಕಾರ ನೀಡಲು ಸಿದ್ಧ ಎಂದು ಏಷ್ಯಾ ಫೆಸಿಫಿಕ್ ವಿದೇಶಾಂಗ ವ್ಯವಹಾರಗಳ ಸಹಾಯಕ ಕಾರ್ಯದರ್ಶಿ ಅಲೈಸ್ ಜಿ ವೆಲ್ಸ್ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos