ಗಾಂಧಿನಗರ, ಮಾ.30, ನ್ಯೂಸ್ ಎಕ್ಸ್ ಪ್ರೆಸ್: ಎಲ್.ಕೆ.ಆಡ್ವಾಣಿಯವರು ಪ್ರತಿನಿಧಿಸುತ್ತಿರುವ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಾಮಪತ್ರ ಸಲ್ಲಿಸಿದರು. ಶಾ ಇದೇ ಮೊದಲ ಬಾರಿಗೆ ಅಮಿತ್ ಶಾ ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ.
ಅಹ್ಮದಾಬಾದ್‍ನ ನಾರಾಯಣಪುರದಲ್ಲಿ ನಡೆದ ರ್ಯಾಲಿಯಲ್ಲಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿಯವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.
ನಾಮಪತ್ರ ಸಲ್ಲಿಕೆಗೆ ಮುನ್ನ ಅವರು ಸರ್ದಾರ್ ವಲ್ಲಭಬಾಯ್ ಪಟೇಲ್ ಪ್ರತಿಮೆಗೆ ಗೌರವ ಸಲ್ಲಿಸಿದರು. ಬಳಿಕ ಡಿಆರ್‍ಎಚ್ ರೀಜೆನ್ಸಿಯಿಂದ ಪಾಟಿದಾರ್ ಚೌಕವರೆಗೆ ರೋಡ್ ಶೋ ನಡೆಸಿದರು.