ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಹೊಸ ಸಮರ !

ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಹೊಸ ಸಮರ !

ಬೆಂಗಳೂರು: ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಹೊಸ ಸಮರ ಸಾರಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ನಡೆಸಲು ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ & ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ನಾಳೆ ಬೆಳಗ್ಗೆ 10 ಗಂಟೆಯಿಂದ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಸಿ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವ ಧನವನ್ನು ₹15 ಸಾವಿರ, ₹10 ಸಾವಿರ ಹೆಚ್ಚಿಸಲಾಗುವುದೆಂದು ಚುನಾವಣಾ ಪೂರ್ವದಲ್ಲಿ ಬೆಳಗಾವಿಯ ಖಾನಪುರದಲ್ಲಿ ಕೈ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭರವಸೆ ಕೊಟ್ಟಿದ್ದರು. ಕಾಂಗ್ರೆಸ್ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ‌‌ ಮಾಡಲು ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒತ್ತಾಯಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos