500 ಕೋಟಿ ಕ್ಲಬ್ ಸೇರಿದ ‘ಅನಿಮಲ್ʼ!

500 ಕೋಟಿ ಕ್ಲಬ್ ಸೇರಿದ ‘ಅನಿಮಲ್ʼ!

ಬೆಂಗಳೂರು: ಡಿಸೆಂಬರ್ 1ರಂದು ‘ಅನಿಮಲ್’ ಸಿನಿಮಾ ರಿಲೀಸ್ ಆಯಿತು. ಮೊದಲ ದಿನ ಸಿನಿಮಾ ಅಬ್ಬರದ ಗಳಿಕೆ ಮಾಡಿತು. ವಿಮರ್ಶಕರಿಂದ ಚಿತ್ರಕ್ಕೆ ನೆಗೆಟಿವ್ ಪ್ರಚಾರ ಸಿಕ್ಕರೂ ಸಿನಿಮಾ ಗಳಿಕೆ ಮೇಲೆ ಯಾವುದೇ ಪ್ರಭಾವ ಉಂಟಾಗಿಲ್ಲ. ʼಅನಿಮಲ್’ ಸಿನಿಮಾದಿಂದ  ನಿರ್ದೇಶಕ ಸಂದೀಪ್ ರೆಡ್ಡಿ ವಂಗ, ಕಲಾವಿದರಾದ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್ ಮೊದಲಾದವರು ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರ ನಿನ್ನೆ ಭರ್ಜರಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರ ಭಾರತದ ಬಾಕ್ಸ್ ಆಫೀಸ್ ಕಲೆಕ್ಷನ್ 500 ಕೋಟಿ ರೂಪಾಯಿ ಗಳಿಕೆ ಆಗಿದೆ. ವಿಚಾರದಲ್ಲಿ ಈ ಚಿತ್ರ ಮತ್ತಷ್ಟು ದಾಖಲೆ ಬರೆಯುವ ಸಾಧ್ಯತೆ ಇದೆ. ಈ ವರ್ಷ 500 ಕೋಟಿ ಕ್ಲಬ್ ಸೇರಿದ ನಾಲ್ಕನೇ ಹಿಂದಿ ಸಿನಿಮಾ ಎನ್ನುವ ಖ್ಯಾತಿ ‘ಅನಿಮಲ್’ ಚಿತ್ರಕ್ಕೆ ಸಿಕ್ಕಿದೆ.

ಫ್ರೆಶ್ ನ್ಯೂಸ್

Latest Posts

Featured Videos