ರಾಜ್ಯದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್

ರಾಜ್ಯದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್

ಬೆಂಗಳೂರು, ಮಾ. 23: ರಾಜ್ಯದಲ್ಲಿ ಕೊರೊನಾ ವೈರಸ್ ತಲ್ಲಣವಾಡುತ್ತುರುವ ಕಾರಣ ವೈರಸ್ ನಿಂದ ಎಲ್ಲ ಜನರಲ್ಲಿ ಭಯ ಶುರುವಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ನ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೌದು ಇಂದು ಕೂಡ ನಮ್ಮ ರಾಜ್ಯದಲ್ಲಿ ಒಬ್ಬ ವ್ಯಕ್ತಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿರುವುದು ತಿಳಿದುಬಂದಿದೆ.

ಕರ್ನಾಟದಕದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮುಲು, ರಾಜ್ಯದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ 27 ಕ್ಕೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ 15 ಲಕ್ಷ ಮಾಸ್ಕ್ ಗಳನ್ನು, 1 ಸಾವಿರ ವೆಂಟಿಲೇಟರ್ 5 ಲಕ್ಷ ಪಿಪಿಇ ಕಿಟ್ ಖರೀದಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos