ವೃಕ್ಷದ ಮಹಾತಾಯಿಗೆ ಮತ್ತೊಂದು ಗರಿ

ವೃಕ್ಷದ ಮಹಾತಾಯಿಗೆ ಮತ್ತೊಂದು ಗರಿ

ಚಾಮರಾಜನಗರ , ಡಿ. 25 : ಸಾವಿರಾರು ಸಸಿಗಳನ್ನು ರಸ್ತೆ ಬದಿಯಲ್ಲಿ ಸಾಲು ಸಾಲಾಗಿ ನೆಟ್ಟು ಅವುಗಳನ್ನು ಮಕ್ಕಳಂತೆ ಪೋಷಿಸಿದ ಸಾಲುಮರದ ತಿಮ್ಮಕ್ಕ ಅವರಿಗೆ ಮಾನಸ ಶಿಕ್ಷಣ ಸಂಸ್ಥೆಯ ಆರ್. ಸಿದ್ದೇಗೌಡ – ಲಿಂಗಮ್ಮ ಸ್ಮರಣಾರ್ಥ ಮಾನಸ ಪ್ರಶಸ್ತಿ 2019 ಅನ್ನು ಸಾಲುಮರದ ತಿಮ್ಮಕ್ಕ ಅವರಿಗೆ ನೀಡಲಾಗುತ್ತಿದೆ.
ಮಾಗಡಿಯ ಸಣ್ಣ ತಾಲೂಕಿನಿಂದ ಬಂದ ಇವರು ತಮಗೆ ಮಕ್ಕಳಾಗಲಿಲ್ಲ ಎಂಬ ಬೇಸರಿಂದ ವೃಕ್ಷಗಳನ್ನು ಬೆಳೆಸುವ ಮೂಲಕ ನಿರಾಸೆ ಸರಿದೂಗಿಸುವ ಕೆಲಸ ಮಾಡಿದ್ದಾರೆ. 4 ಕಿ.ಮೀ. ಪ್ರದೇಶದಲ್ಲಿ ಮರಗಳನ್ನು ಬೆಳೆಸುವ ಮೂಲಕ ಇಡೀ ವಿಶ್ವಕ್ಕೆ ಮಾದರಿ. ಈ ಬಾರಿ ಮಾನಸ ಪ್ರಶಸ್ತಿ ಕೊಳ್ಳೇಗಾಲದ ಮಾನಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಡಿ. 27ರಿಂದ 29ರವರೆಗೆ ಮಾನಸೋತ್ಸವ ಕಾರ್ಯಕ್ರಮ ನಡೆಯಲಿದೆ. 27ರ ಬೆಳಗ್ಗೆ 10ಕ್ಕೆ ಸಚಿವ ಸಿ.ಟಿ.ರವಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಈ ಬಾರಿ 25 ಸಾವಿರ ರೂ. ನಿಂದ 50 ಸಾವಿರ ರೂ.ಗೆ ಪ್ರಶಸ್ತಿ ಮೊತ್ತ ಹೆಚ್ಚಿಸಲಾಗಿದೆ. ಈ ಹಿಂದೆ ಖ್ಯಾತ ಕಾದಂಬರಿಕಾರ ಎಸ್.ಎಲ್ ಭೈರಪ್ಪ, ಕವಿ ನಿಸಾರ್ ಅಹಮ್ಮದ್, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ, ರೈತ ಹೋರಾಟಗಾರ ಜಿ. ಮಾದೇಗೌಡ, ಭತ್ತದ ವಿಜ್ಞಾನಿ ಮಹಾದೇವಪ್ಪ, ಸಂಸದ ವಿ. ಶ್ರೀನಿವಾಸಪ್ರಸಾದ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos