ಇತ್ತೀಚಿಗಷ್ಟೇ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬುಗಳನ್ನು ಬಳಸಲಾಗುತ್ತಿದೆ ಎಂಬ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಸಾಕಷ್ಟು ಕೋಲಾಹಲವನ್ನು ಸೃಷ್ಟಿಸಿದೆ.
ಹೌದು, ಆಂಧ್ರಪ್ರದೇಶದಲ್ಲಿರುವ ತಿರುಪತಿ ದೇವಾಲಯದಲ್ಲಿ ಅತಿ ಹೆಚ್ಚು ಮಣ್ಣಣೆಯನ್ನು ಪಡೆದಿರುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲಾ ರೀತಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು ಇದರ ಬೆನ್ನಲ್ಲೇ ಇದೀಗ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿರುವುದು ತಿರುಪತಿ ಭಕ್ತಾದಿಗಳಿಗೆ ಇದು ಮತ್ತೊಂದು ಶಾಕ್ ಕೊಟ್ಟಂತಿದೆ.
ಯೆಸ್..ತಿರುಪತಿ ಲಡ್ಡು ಪ್ರಸಾದದಲ್ಲಿ ಗುಟ್ಕಾ ಪ್ಯಾಕೆಟ್ ಕಂಡು ಬರುತ್ತಿದ್ದಂತೆ ಲಡ್ಡು ತಯಾರಿಕೆ ಗುಣ ಪಟ್ಟದ ಬಗ್ಗೆ ಇದೀಗ ಸಾಕಷ್ಟು ಅನುಮಾನಗಳು ಹೆಚ್ಚಿವೆ. ತಿರುಪತಿ ದೇವಸ್ಥಾನದಲ್ಲಿ ಲಡ್ಡು ಪ್ರಸಾದದಿಂದ ಹೆಚ್ಚು ಆದಾಯ ಬರುತ್ತಿದ್ದು ಇದೀಗ ಈ ಆದಾಯಕ್ಕೆ ಕತ್ತರಿ ಬಿಡುವ ಎಲ್ಲಾ ಸಾಧ್ಯತೆಗಳು ಕಂಡುಬರುತ್ತವೆ.
ತಿರುಮಲ ತಿರುಪತಿ ದೇವಸ್ಥಾನದಂತಹ ಸುಪ್ರಸಿದ್ಧ ಪುಣ್ಯಕ್ಷೇತ್ರದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ತಿರುಪತಿ ಲಡ್ಡುವನ್ನು ಈಗಾಗಲೇ ಅಪವಿತ್ರಗೊಳಿಸುವ ಕೃತ್ಯ ನಡೆದಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದು ಸಮಸ್ತ ಹಿಂದೂಗಳ ಆತಂಕವನ್ನು ಹೆಚ್ಚಿಸಿದೆ. ಇದನ್ನೂ ಓದಿ: ಇಂದೇ ನಿರ್ಧಾರವಾಗುತ್ತಾ ದರ್ಶನ್ ಜಾಮೀನು ಅರ್ಜಿ ವಿಚಾರಣೆ.?
ಖಮ್ಮಂ ಜಿಲ್ಲೆಯ ಗ್ರಾಮಾಂತರ ಮಂಡಲ ವ್ಯಾಪ್ತಿಯ ಗೊಲ್ಲಗುಡೆಂ ಪಂಚಾಯತ್ ಕಾರ್ತಿಕೇಯ ಟೌನ್‌ಶಿಪ್‌ನ ನಿವಾಸಿ ದೊಂತು ಪದ್ಮಾವತಿ ಅವರು ಸೆಪ್ಟೆಂಬರ್ 19 ರಂದು ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳಿ ತಿಮ್ಮಪ್ಪನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಹಿಂತಿರುಗುವಾಗ ತನ್ನ ಸಂಬಂಧಿಕರು ಮತ್ತು ನೆರೆಹೊರೆಯವರೊಂದಿಗೆ ಹಂಚಿಕೊಳ್ಳಲು ಶ್ರೀವಾರಿ ಲಡ್ಡು ಪ್ರಸಾದವನ್ನು ತಂದಿದ್ದರು. ಭಾನುವಾರ (ಸೆಪ್ಟೆಂಬರ್ 22) ಪ್ರಸಾದ ಹಂಚಲು ಲಡ್ಡು ತೆಗೆದು ನೋಡಿದಾಗ ಅದರಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿದೆ.
ಅತ್ಯಂತ ಪವಿತ್ರವಾದ ಲಡ್ಡೂವಿನಲ್ಲಿ ಗೋಡಂಬಿ, ಒಣದ್ರಾಕ್ಷಿ, ಬಾದಾಮಿ ಬರುತ್ತಿರುವುದನ್ನು ನೋಡಿದ ಪದ್ಮಾವತಿಗೆ ಅದೇ ಸಮಯಕ್ಕೆ ಗುಟ್ಕಾ ಪ್ಯಾಕೆಟ್ ಕಂಡು ಆಶ್ಚರ್ಯವಾಗಿದೆ. ಈ ವಿಷಯವನ್ನು ತಮ್ಮ ಕುಟುಂಬಸ್ಥರಿಗೆ ತಿಳಿಸಿ, ಆ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಹೀಗೆ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಸಿಕ್ಕಿರುವುದು ಇದೇ ಮೊದಲಲ್ಲ. 2012ರಲ್ಲೂ ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಕಾಣಿಸಿಕೊಂಡಿತ್ತು ಎಂಬುದು ಗಮನಾರ್ಹ.
ಅದೇನೆ ಆಗಲಿ ಜಗತ್ ಪ್ರಸಿದ್ಧಿಯಾಗಿರುವ ತಿರುಪತಿ ದೇವಾಲಯದಲ್ಲಿ ಈ ರೀತಿ ಲಡ್ಡು ಪ್ರಸಾದದಲ್ಲಿ ಕಲಬೆರಿಕೆ ಮತ್ತು ಇತರ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ತಿರುಪತಿ ಭಕ್ತಾದಿಗಳಲ್ಲಿ ಆತಂಕ ಸೃಷ್ಟಿಸಿದೆ.