ಅಣ್ಣನ ಹುಟ್ಟು ಹಬ್ಬ ಸಂಭ್ರಮದಲ್ಲಿ ‘ಅಪ್ಪು’

ಅಣ್ಣನ ಹುಟ್ಟು ಹಬ್ಬ ಸಂಭ್ರಮದಲ್ಲಿ ‘ಅಪ್ಪು’

ಬೆಂಗಳೂರು, ಜು.12 : ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಇಂದು ತಮ್ಮ 57ನೇ ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದಂದು ತಮ್ಮ ಟ್ವಿಟ್ಟರ್ ಹಾಗೂ ಫೇಸ್ಬುಕ್ನಲ್ಲಿ ಅಧಿಕೃತ ಖಾತೆ ತೆರೆಯುವ ಮೂಲಕ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಶಿವಣ್ಣ ಆರು ತಿಂಗಳಿನಿಂದ ಭುಜದ ನೋವಿನಿಂದ ಬಳಲುತ್ತಿದ್ದರು. ಶಸ್ತ್ರ ಚಿಕಿತ್ಸೆಗಾಗಿ ಲಂಡನ್ಗೆ ತೆರಳಿದ್ದರು. ಶಿವಣ್ಣ ಜೊತೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿ ನಿವೇದಿತಾ ಕೂಡ ಲಂಡನ್ಗೆ ತೆರಳಿದ್ದಾರೆ. ಪುನೀತ್ ರಾಜಕುಮಾರ್ ಕೂಡ ಲಂಡನ್ಗೆ ತೆರಳಿ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ.
ಶಿವಣ್ಣ ಕೇಕ್ ಕತ್ತರಿಸುವ ಮೂಲಕ ಕುಟುಂಬದ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ನಟ ಪುನೀತ್ ರಾಜ್ಕುಮಾರ್ ತಮ್ಮ ಅಣ್ಣನ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos