ಬೆಂಗಳೂರು, ಆ. 24 : ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ನಾಲ್ವರ ಆರೋಪಿಗಳ ನ್ನು ಜೀವಕ್ಕೆ ಬೆದರಿಕೆ ಇರುವುದರಿಂದ ಎಲ್ಲರನ್ನೂ ಒಂದೇ ಜೈಲಿನಲ್ಲಿಡುವುದು ಸರಿಯಲ್ಲ, ಸಾಕ್ಷ್ಯ ನಾಶಕ್ಕೂ ಯತ್ನಿಸಬಹುದು. ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡುವುದು ಉತ್ತಮ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.
ರಾಜ್ಯದಲ್ಲಿನ ಬೇರೆ ಬೇರೆ ಜೈಲುಗಳಿಗೆ ಸದ್ಯದಲ್ಲಿ ಸ್ಥಳಾಂತರ ಮಾಡಲಾಗುತ್ತಿದೆ. ಅಮೋಲ್ ಕಾಳೆ, ಪರಶುರಾಮ್ ವಾಗ್ಮೋರೆ, ಮನೋಹರ್ ಎಡಾವೆ, ಮತ್ತು ಅಮಿತ್ ದಿಗ್ವೀಕರ್ ಅವರನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಬೇಕೆಂದು ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿಗಳು ವಿಶೇಷ ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡಿದ್ದಾರೆ.