ರೈತರನ್ನ ಬಂಧಿಸಿರುವುದು ಖಂಡನೀಯ ಸಿಎಂ

ರೈತರನ್ನ ಬಂಧಿಸಿರುವುದು ಖಂಡನೀಯ ಸಿಎಂ

ಬೆಂಗಳೂರು: ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ಶಿಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ.

ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದಿಕೊಂಡಿರುವ ಅವರು, ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು‌ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ.

ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ.

ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ.

 

ಫ್ರೆಶ್ ನ್ಯೂಸ್

Latest Posts

Featured Videos