ಅಲೋಕ್ ಖಡಕ್ ವಾರ್ನಿಂಗ್

ಅಲೋಕ್ ಖಡಕ್ ವಾರ್ನಿಂಗ್

ಬೆಂಗಳೂರು, ಜೂ. 27 : ವಿಧಾನಸೌಧ ಮುಂಭಾಗದಲ್ಲಿ ವಾಲ್ಮೀಕಿ ಸಮುದಾಯದ ಪ್ರತಿಭಟನೆ ವೇಳೆ ಉಂಟಾದ ಗದ್ದಲಕ್ಕೆ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದು, ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ವಾಲ್ಮೀಕಿ ಸಮುದಾಯದ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿದೆ.

ವಿಧಾನಸೌಧದ ಸುತ್ತಮುತ್ತ ಭಾರಿ ಗದ್ದಲ ಉಂಟಾದ ಹಿನ್ನಲೆ ಸಂಚಾರದಟ್ಟಣೆಯಿಂದ ಸವಾರರು ಪರದಾಡಿದ್ದರು. ಸಚಿವ ಡಿ.ಕೆ. ಶಿವಕುಮಾರ್ ಅವರಿಗೂ ಪ್ರತಿಭಟನೆ ಬಿಸಿ ತಟ್ಟಿತ್ತು. ಮೆಟ್ರೋ ರೈಲಿನ ಮೂಲಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅವರು ಹಾಜರಾಗಿದ್ದರು. ಹೀಗಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಘಟನೆ ಸಂಬಂಧ ಅಲೋಕ್ ಕುಮಾರ್ ಅವರಿಂದ ಮಾಹಿತಿ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಅಲೋಕ್ ಕುಮಾರ್ ಅವರು ವಿಧಾನಸೌಧ ಭದ್ರತೆಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಜೊತೆ ಮಂಗಳವಾರ ಸಂಜೆ ಸಭೆ ನಡೆಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos