ಹೊಸ ದಾಖಲೆ ಬರೆದ ಆರ್​. ಅಶ್ವಿನ್

ಹೊಸ ದಾಖಲೆ ಬರೆದ ಆರ್​. ಅಶ್ವಿನ್

ಬೆಂಗಳೂರು: ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್​ ನಡುವಿನ ನಾಲ್ಕನೇ ಟೆಸ್ಟ್​ ಪಂದ್ಯ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಟೀಂ ಇಂಡಿಯಾದ ಸ್ಪಿನ್ನರ್​ ಆರ್​. ಅಶ್ವಿನ್​ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟೀಂ ಇಂಡಿಯಾದ ಸ್ಪಿನ್ನರ್ ಆರ್. ಅಶ್ವಿನ್ ನಿನ್ನೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಈ ಮೂಲಕ ಆಂಗ್ಲರ ವಿರುದ್ಧದ ಟೆಸ್ಟ್​ನಲ್ಲಿ 100 ವಿಕೆಟ್ ಕಿತ್ತ ಇತಿಹಾಸದ ಮೊದಲ ಭಾರತೀಯ ಬೌಲರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ಇದರ ಜೊತೆಗೆ + 1000 ಕ್ಕೂ ಅಧಿಕ ರನ್ ಕಲೆಹಾಕಿದ ಏಷ್ಯಾದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಅಶ್ವಿನ್ ಪಾತ್ರರಾಗಿದ್ದಾರೆ.

ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ವಿರುದ್ಧ 23 ಟೆಸ್ಟ್​ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 42 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ಮೂಲಕ 100 ವಿಕೆಟ್​ಗಳನ್ನು ಕಬಳಿಸಿ ಈ ವಿಶೇಷ ದಾಖಲೆ ಬರೆದಿದ್ದಾರೆ. ಇದರ ಜೊತೆಗೆ 1000ಕ್ಕೂ ಅಧಿಕ ರನ್ ಕಲೆಹಾಕಿದ ಏಷ್ಯಾದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಅಶ್ವಿನ್ ಪಾತ್ರರಾಗಿದ್ದಾರೆ. ಅಶ್ವಿನ್ ಅವರನ್ನು ಹೊರತುಪಡಿಸಿ ಏಷ್ಯಾದ ಯಾವುದೇ ಆಟಗಾರ 1000 ರನ್​+100 ವಿಕೆಟ್ ಕಬಳಿಸಿಲ್ಲ ಎಂಬುದು ವಿಶೇಷ.

 

ಫ್ರೆಶ್ ನ್ಯೂಸ್

Latest Posts

Featured Videos