ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ!

ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಎನ್ನುವುದು ಚಿಕ್ಕ ಕ್ರೀಡೆಯಾಗಿ ಉಳಿದಿಲ್ಲ. ಒಂದು ದೊಡ್ಡ ಕ್ರೀಡೆಯಾಗಿ ಬೆಳೆದಿದೆ, ಕ್ರಿಕೆಟ್ ಎನ್ನುವುದು ನಮ್ಮ ಎಮೋಷನ್ ಆಗಿದೆ. ಏಷ್ಯಾಕಪ್ 2023 ಟೂರ್ನಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಭಾನುವಾರದಂದು ಭಾರತ ಹಾಗೂ ಶ್ರೀಲಂಕಾ ನಡುನೆ ಏಷ್ಯಾಕಪ್ ಫೈನಲ್ ಪಂದ್ಯ ನಡೆಯಲಿದೆ. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಮ್ಯಾಚ್ ಏರ್ಪಡಿಸಲಾಗಿದೆ. 2023 ರ ಏಷ್ಯಾಕಪ್‌ನ ಪ್ರತಿಯೊಂದು ಪಂದ್ಯದ ಮೇಲೆ ಮಳೆಯ ಕರಿ ನೆರಳು ಬಿದ್ದಿದೆ. ಕೆಲ ಪಂದ್ಯ ರದ್ದಾದರೆ, ಭಾರತ-ಪಾಕ್ ಪಂದ್ಯ ಮೀಸಲು ದಿನದಂದು ನಡೆಯಿತು. ಇದೀಗ ಹವಾಮಾನ ಮುನ್ಸೂಚನೆಯ ಪ್ರಕಾರ ಇಂಡೋ-ಲಂಕಾ ಫೈನಲ್ ಪಂದ್ಯಕ್ಕೆ ಭಾನುವಾರವೂ ಮಳೆ ಅಡ್ಡಿ ಪಡಿಸುವ ನಿರೀಕ್ಷೆಯಿದೆ.
ಕೊಲಂಬೊದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ತುಂತುರು ಮಳೆ ಮತ್ತು ಸೂರ್ಯನ ಬೆಳಕು ಕಣ್ಣಾಮುಚ್ಚಾಲೆ ಆಡುತ್ತಿದೆ. ದುರದೃಷ್ಟವಶಾತ್, ಭಾರತ ಮತ್ತು ಶ್ರೀಲಂಕಾ ಏಷ್ಯಾಕಪ್ 2023ರ ಫೈನಲ್ ಪಂದ್ಯದ ಮೇಲೆ ಮಳೆಯು ಪರಿಣಾಮ ಬೀರುವ ಸಾಧ್ಯತೆಯಿದೆ.
ಪಂದ್ಯವು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಈ ಸಂದರ್ಭ ಮಳೆ ಬರುವ ಲಕ್ಷಣವಿಲ್ಲ. ಆದರೆ, ಸಂಜೆಯ ವೇಳೆಗೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಶೇ. 50ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos