ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 100 ಪದಕಗಳ ಸಾಧನೆ!

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 100 ಪದಕಗಳ ಸಾಧನೆ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಭಾರತದ ಆಟಗಾರರು ಎಷ್ಟು ಮುಂದೆ ಹೋಗಿದ್ದಾರೆಂದರೆ ಮೊದಲು ಭಾರತದ ಆಟಗಾರರು ಅಷ್ಟು ಆಟಗಳಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಆದರೆ ಈಗ ಏಷ್ಯಾ ಗೇಮ್ಸ್ ನಲ್ಲಿ ಭಾರತಕ್ಕೆ ಒಂದಲ್ಲ ಎರಡಲ್ಲ ನೂರು ಪದಕಗಳ ಸಾಧನೆ ಮಾಡಿದ್ದಾರೆ. ಇದರಿಂದ ನಮ್ಮ ಭಾರತದ ಹೆಮ್ಮೆ ಇನ್ನು ಹೆಚ್ಚಾಗಿದೆ.
ಚೀನಾದಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ನೂರು ಪದಕಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ. ಕ್ರೀಡಾಕೂಟದ 14ನೇ ದಿನದಂದು ಭಾರತದ ಮಹಿಳಾ ಕಬ್ಬಡಿ ತಂಡ ಚಿನ್ನ ಗೆಲ್ಲುವ ಮೂಲಕ ಪದಕಗಳ ಶತಕವನ್ನು ಪೂರೈಸಿತು. ಈ 14 ದಿನಗಳಲ್ಲಿ ಏಷ್ಯಾಡ್ ಪ್ರಯಾಣದಲ್ಲಿ ಭಾರತ ಇದುವರೆಗೆ ಒಟ್ಟು 100 ಪದಕಗಳನ್ನು ಗೆದ್ದಿದ್ದು, ಇದರಲ್ಲಿ 25 ಚಿನ್ನ, 35 ಬೆಳ್ಳಿ ಹಾಗೂ 40 ಕಂಚಿನ ಪದಕಗಳು ಸೇರಿವೆ. ಆರ್ಚರಿಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಜ್ಯೋತಿ ವೆನ್ನಮ್ ದಿನವನ್ನು ಆರಂಭಿಸಿದರೆ, ಅದಿತಿ ಸ್ವಾಮಿ ಕಾಂಪೌಂಡ್ ಆರ್ಚರಿಯಲ್ಲಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳ ಶತಕ ಬಾರಿಸಿದ ಭಾರತೀಯ ಸ್ಪರ್ಧಿಗಳ ಸಾಧನೆಯನ್ನು ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos