ಏಷ್ಯನ್ ಗೇಮ್ಸ್ ಸೆಮಿ ಫೈನಲ್: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ!

ಏಷ್ಯನ್ ಗೇಮ್ಸ್ ಸೆಮಿ ಫೈನಲ್: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಎನ್ನುವುದು ಚಿಕ್ಕ ಕ್ರೀಡೆಯಾಗಿ ಉಳಿದಿಲ್ಲ ಒಂದು ದೊಡ್ಡ ಕ್ರೀಡೆಯಾಗಿ ಬೆಳೆದಿದೆ, ಕ್ರಿಕೆಟ್ ಎನ್ನುವುದು ನಮ್ಮ ಎಮೋಷನ್ ಆಗಿದೆ.
ಏಷ್ಯನ್ ಗೇಮ್ಸ್ ಪುರುಷರ ಟಿ20 ಸೆಮಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಆವೇಶ್ ಖಾನ್ ಬದಲು ಶಹ್ಬಾಜ್ ಅಹ್ಮದ್ ಸ್ಥಾನ ಪಡೆದುಕೊಂಡಿದ್ದಾರೆ.
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದು, ಪದಕಗಳ ಸಂಖ್ಯೆ ನೂರರತ್ತ ತಲುಪುತ್ತಿದೆ. ಇದರ ನಡುವೆ ಪಿಂಗ್ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್ನಲ್ಲಿ ಏಷ್ಯನ್ ಗೇಮ್ಸ್ ಪುರುಷರ ಟಿ20 ಸೆಮಿ ಫೈನಲ್ ಪಂದ್ಯ ನಡೆಯುತ್ತಿದ್ದು ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ತಂಡ ಸೈಫ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿದೆ. ಈಗಾಗಲೇ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಆವೇಶ್ ಖಾನ್ ಬದಲು ಶಹ್ಬಾಜ್ ಅಹ್ಮದ್ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಶಹ್ಬಾಜ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ. ಉಳಿದಂತೆ ಓಪನರ್ಗಳಾಗಿ ರುತುರಾಜ್ ಮತ್ತು ಯಶಸ್ವಿ ಜೈಸ್ವಾಲ್ ಇದ್ದರೆ ನಂತರದಲ್ಲಿ ತಿಲಕ್ ವರ್ಮಾ, ಜಿತೇಶ್ ಶರ್ಮಾ, ರಿಂಕು ಸಿಂಗ್ ಇದ್ದಾರೆ. ಆಲ್ರೌಂಡರ್ಗಳಾಗಿ ಶಿವಂ ದುಬೆ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡಿದ್ದಾರೆ. ಬಿಷ್ಟೋಯಿ, ಸಾಯಿ ಕಿಶೋರ್ ಹಾಗೂ ಅರ್ಶ್ದೀಪ್ ಸಿಂಗ್ ಪ್ರಮುಖ ಬೌಲರ್ಗಳಾಗಿದ್ದಾರೆ.
ಇಂದಿನ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ಗೆ ಪ್ರವೇಶ ಪಡೆಯಲಿದೆ. ಇದರ ಮೂಲಕ ಒಂದು ಪದಕ ಖಚಿತ ಪಡಿಸಿಕೊಳ್ಳುತ್ತದೆ. ಸೋತ ತಂಡ ಸೆಮಿ ಫೈನಲ್-2 ನಲ್ಲಿ ಸೋತ ತಂಡದ ವಿರುದ್ಧ ಕಂಚಿನ ಪದಕಕ್ಕಾಗಿ ಹೋರಾಟ ನಡೆಸಲಿದೆ. ಭಾರತ ತಂಡ ಕ್ವಾರ್ಟರ್ ಫೈನಲ್ನಿಂದ ತನ್ನ ಅಭಿಯಾನ ಶುರು ಮಾಡಿತ್ತು. ಇಲ್ಲಿ ನೇಪಾಳ ವಿರುದ್ಧ ಬೊಂಬಾಟ್ ಪ್ರದರ್ಶನ ತೋರಿತ್ತು. ಯಶಸ್ವಿ ಜೈಸ್ವಾಲ್ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ್ದರೆ ರಿಂಕು ಸಿಂಗ್ ಪಂದ್ಯವನ್ನು ಅತ್ಯುತ್ತಮವಾಗಿ ಫಿನಿಶ್ ಮಾಡಿದ್ದರು. ರವಿ ಬಿಷ್ಟೋಯಿ ಬೌಲಿಂಗ್ನಲ್ಲಿ ಮಿಂಚಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos