ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ..!

ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ..!

ಲಕ್ನೋ, ಡಿ. 5 : ಉತ್ತರ ಪ್ರದೇಶದ ಉನ್ನಾವೊ ಅತ್ಯಾಚಾರ ಸಂತ್ರಸ್ತೆಗೆ ಐವರು ದುಷ್ಕರ್ಮಿಗಳು ಇಂದು ಬೆಳಗ್ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ತೀವ್ರ ಸುಟ್ಟ ಗಾಯಗಳಾಗಿರುವ ಸಂತ್ರಸ್ತೆಯನ್ನು ಲಕ್ನೋದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಆಕೆಯ ಸ್ಥಿತಿ ಶೋಚನೀಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಬಿಹಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಧುಪುರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಅತ್ಯಾಚಾರ ಆರೋಪ ಎದುರಿಸುತ್ತಿರುವ ದುಷ್ಕರ್ಮಿಯೂ ಸೇರಿದಂತೆ ಐವರು ಅತ್ಯಾಚಾರ ಸಂತ್ರಸ್ತೆ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದರು. ತೀವ್ರ ಗಾಯಕ್ಕೊಳಗಾದ ಆಕೆಯನ್ನು ತಕ್ಷಣ ಲಕ್ನೋದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos