ಎಟಿಎಂನಲ್ಲಿ ಹಣ ಡ್ರಾ: 2 ವ್ಯಕ್ತಿಗಳಿ ನಡುವೆ ಫೈಟ್.!

ಎಟಿಎಂನಲ್ಲಿ ಹಣ ಡ್ರಾ: 2 ವ್ಯಕ್ತಿಗಳಿ ನಡುವೆ ಫೈಟ್.!

ಹುಬ್ಬಳ್ಳಿ, ಮೇ. 14, ನ್ಯೂಸ್ ಎಕ್ಸ್ ಪ್ರೆಸ್: ನಗರದ ಚೆನ್ನಮ್ಮ ಸರ್ಕಲ್ ಬಳಿ ಇರುವ ಎಕ್ಸಿಸ್ ಬ್ಯಾಂಕ್ ಎಟಿಎಂ ಬಳಿ ಹಣ ಡ್ರಾ ಮಾಡಲು ಬಂದಿದ್ದ ವ್ಯಕ್ತಿಗಳಿಬ್ಬರು ನಡುವೆ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.

ಎಟಿಎಂನಿಂದ ಹಣ ಡ್ರಾ ಮಾಡಲು ಸರದಿಯಲ್ಲಿ ನಿಲ್ಲುವ ಕುರಿತಂತೆ ಇಬ್ಬರ ನಡುವೆ ಮಾತಿನ ಚಕಮಕಿ ಏರ್ಪಟ್ಟಿದ್ದು, ಬಳಿಕ ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸರದಿ ಸಾಲಿನಲ್ಲಿ ನಿಲ್ಲುವ ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿರುವ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಎಟಿಎಂನಲ್ಲಿ ಭದ್ರತಾ ಸಿಬ್ಬಂದಿ ಕೊರತೆಯಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos