ಪತ್ರಕರ್ತರ ಮೇಲೆ ದೌರ್ಜನ್ಯ

ಪತ್ರಕರ್ತರ ಮೇಲೆ ದೌರ್ಜನ್ಯ

ಕೊಪ್ಪಳ : ಬೆಂಗಳೂರಿನಲ್ಲಿ ನಡೆದ ಹಲ್ಲೆಯೂ ತೀವ್ರ ನೋವಿನ ಸಂಗತಿ. ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು. ಸರ್ಕಾರ ಈ ಪ್ರಕರಣ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.

ಬೆಂಗಳೂರಿನಲ್ಲಿ ನಡೆದ ಘಟನೆಯಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದ ಖಂಡಿಸಿ ಕೊಪ್ಪಳ ಮೀಡಿಯಾ ಕ್ಲಬ್ ಬುಧವಾರ ಪತ್ರ ಚಳುವಳಿ ನಡೆಸಿತು.

ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ, ಸಮಾಜದ ಏಳಿಗೆಗಾಗಿ ಪತ್ರಕರ್ತರು ಹಗಲಿರುಳು ಕಾರ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿ ಕರ್ತವ್ಯ ನಿರತ ಪತ್ರಕರ್ತರ ಮೇಲೆ ಎಲ್ಲೆಡೆ ಹಲ್ಲೆ, ದೌರ್ಜನ್ಯ ನಡೆಯುತ್ತಿವೆ..

ಪತ್ರಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಕೂಡಲೇ ಪತ್ರಕರ್ತರಿಗೆ ವೈದ್ಯರ ರಕ್ಷಣೆಗೆ ಇರುವ ಕಾಯ್ದೆ ವ್ಯಾಪ್ತಿಗೆ ಪತ್ರಕರ್ತರನ್ನು ತರಬೇಕು ಪತ್ರಕರ್ತರಿಗೆ ಸರ್ಕರವೇ ವಿಮಾ ಸೌಲಭ್ಯ ಕಲ್ಪಿಸಬೇಕು. ಈ ಎರಡು ಬೇಡಿಕೆ ಈಡೇರಿಸಬೇಕೆಂದು ಕೊಪ್ಪಳ ಮೀಡಿಯಾ ಕ್ಲಬ್ ಒತ್ತಾಯಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos