ಆನೇಕಲ್, ಡಿ. 19: ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಎಟುಬಿ ಹೋಟೆಲ್ ಮೇಲೆ ಬಿಬಿಎಂಪಿ ಅಧಿಕಾರಿಗಳ ತಂಡ ಇಂದು ದಿಢೀರ್ ದಾಳಿ ನಡೆಸಿ ಒಂದು ಲಕ್ಷ ರೂ. ದಂಡ ವಿಧಿಸಿದ್ದಾರೆ.
ಬೊಮ್ಮನಹಳ್ಳಿ ಬಿಬಿಎಂಪಿ ವಲಯದ ಜಂಟಿ ಆಯುಕ್ತ ರಾಮಕೃಷ್ಣ ನೇತ್ರತ್ವದ ತಂಡ ಎಚ್‌ಎಸ್‌ಆರ್ ಬಡಾವಣೆಯಲ್ಲಿರುವ ಎಟುಬಿ ಹೋಟೆಲ್ ಮೇಲೆ ದಾಳಿ ಮಾಡಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಹೋಟೆಲ್ ಮಾಲೀಕರಿಗೆ ದಂಡ ವಿಧಿಸಿದ ಅಧಿಕಾರಿಗಳ ತಂಡ ಸ್ವಚ್ಚತೆ ಕಾಪಾಡುವಂತೆ ಜಂಟಿ ಆಯುಕ್ತ ರಾಮಕೃಷ್ಣ ಅವರು ಸೂಚಿಸಿದರು.