ಏಕದಿನ ವಿಶ್ವಕಪ್ 2023: ಮೊದಲ ಗೆಲುವು ಸಾಧಿಸಿದ ಆಸ್ಟ್ರೇಲಿಯಾ!

ಏಕದಿನ ವಿಶ್ವಕಪ್ 2023: ಮೊದಲ ಗೆಲುವು ಸಾಧಿಸಿದ ಆಸ್ಟ್ರೇಲಿಯಾ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಎನ್ನುವುದು ಚಿಕ್ಕ ಕ್ರೀಡೆಯಾಗಿ ಉಳಿದಿಲ್ಲ. ಒಂದು ದೊಡ್ಡ ಕ್ರೀಡೆಯಾಗಿ ಬೆಳೆದಿದೆ, ಕ್ರಿಕೆಟ್ ಎನ್ನುವುದು ನಮ್ಮ ಎಮೋಷನ್ ಆಗಿದೆ.
2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾ ತಂಡ ಶ್ರೀಲಂಕಾವನ್ನು 5 ವಿಕೆಟ್ ಗಳಿಂದ ಮಣಿಸುವ ಮೂಲಕ ಪಂದ್ಯಾವಳಿಯಲ್ಲಿ ಮೊದಲ ಗೆಲುವು ಸಾಧಿಸಿದೆ.
ಲಖನೌನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ಭರ್ಜರಿ ಓಪನಿಂಗ್ ಪಡೆದರು 209 ರನ್ ಗಳ ಅಲ್ಪಮೊತ್ತಕ್ಕೆ ಆಲೌಟ್ ಆಯಿತು. ಆರಂಭಿಕರಾದ ನಿಸಾಂಕ 61 ಮತ್ತು ಕುಸಾಲ್ ಪೆರೆರಾ 78 ರನ್ ಗಳ ಸಿಡಿಸಿ ತಂಡಕ್ಕೆ ಅದ್ಭುತ ಅಡಿಪಾಯ ಹಾಕಿಕೊಟ್ಟರು. ಆದರೆ ನಂತರ ಯಾವು ಆಟಗಾರನು ಹೆಚ್ಚು ಕಾಲ ಕ್ರೀಸ್ ನಲ್ಲಿ ಉಳಿಯಲಿಲ್ಲ.
ಹೀಗಾಗಿ ಶ್ರೀಲಂಕಾ 43.3 ಓವರ್ ನಲ್ಲಿ 209 ರನ್ ಗಳಿಗೆ ಆಲೌಟ್ ಆಯಿತು. ಇನ್ನು ಅಲ್ಪಮೊತ್ತದ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಇನ್ನು 88 ಎಸೆತಗಳು ಬಾಕಿ ಇರುವಂತೆ 5 ವಿಕೆಟ್ ನಷ್ಟಕ್ಕೆ 215 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು. ಆಸ್ಟ್ರೇಲಿಯಾ ಪಂದ್ಯಾವಳಿಯಲ್ಲಿ ಮೊದಲೆರೆಡು ಪಂದ್ಯಗಳಲ್ಲಿ ಸೋಲು ಕಂಡಿತ್ತು.
ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ 52, ಡೇವಿಡ್ ವಾರ್ನರ್ 11, ಮಾರ್ನಸ್ ಲ್ಯಾಬುಸ್ಚಾಗ್ನೆ 40, ಜೋಶ್ ಇಂಗ್ಲಿಸ್ 58 ಹಾಗೂ ಗ್ಲೇನ್ ಮ್ಯಾಕ್ಸ್ ವೇಲ್ ಅಜೇಯ 31 ರನ್ ಬಾರಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos