ಸದ್ಯದಲ್ಲೇ ಸ್ವಯಂಚಾಲಿತವಾಗಿ ವರ್ಗಾವಣೆಗೊಳ್ಳಲಿದೆ ಪಿಎಫ್ ಖಾತೆ!

ಸದ್ಯದಲ್ಲೇ ಸ್ವಯಂಚಾಲಿತವಾಗಿ ವರ್ಗಾವಣೆಗೊಳ್ಳಲಿದೆ ಪಿಎಫ್ ಖಾತೆ!

ಬೆಂಗಳೂರು, ಏ. 19, ನ್ಯೂಸ್ ಎಕ್ಸ್ ಪ್ರೆಸ್: ಪಿಎಫ್ ಖಾತೆದಾರರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಉದ್ಯೋಗಿಗಳು ಒಂದು ಕಂಪನಿಯಿಂದ ಇನ್ನೊಂದು ಕಂಪನಿಗೆ ತಮ್ಮ ಉದ್ಯೋಗವನ್ನು ಬದಲಿಸಿದರೆ ಪಿಎಫ್ ಖಾತೆ ಸ್ವಯಂ ಚಾಲಿತವಾಗಿ ವರ್ಗಾವಣೆಗೊಳ್ಳಲಿದೆ. ಈ ಕುರಿತ ಪ್ರಕ್ರಿಯೆಗಳನ್ನು ಈಗಾಗಲೇ ಆರಂಭಿಸಲಾಗಿದ್ದು, ಮುಂದಿನ ಹಣಕಾಸು ವರ್ಷದಿಂದ ಉದ್ಯೋಗಿಗಳು ಒಂದು ಕಂಪನಿಯಿಂದ ಮತ್ತೊಂದು ಕಂಪನಿಗೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಅವರ ಪಿಎಫ್ ಖಾತೆಯೂ ಸಹ ಸ್ವಯಂ ಚಾಲಿತವಾಗಿ ವರ್ಗಾವಣೆಯಾಗುತ್ತದೆ. ಈ ಕುರಿತ ಕಾರ್ಯ ಪ್ರಗತಿಯಲ್ಲಿದ್ದು, ಡಿಜಿಟಲೀಕರಣ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಈಗಾಗಲೇ ಕೆಲವು ಕಡೆ ಇದು ಪ್ರಾಯೋಗಿಕವಾಗಿ ಜಾರಿಗೆ ಬಂದಿದ್ದು, ಮುಂದಿನ ಹಣಕಾಸು ವರ್ಷದಲ್ಲಿ ಎಲ್ಲರಿಗೂ ಇದು ಲಭ್ಯವಾಗಲಿದೆ.

ಫ್ರೆಶ್ ನ್ಯೂಸ್

Latest Posts

Featured Videos