ನೋಡುನೋಡುತ್ತಿದ್ದಂತೆ ಸುಟ್ಟು ಕರಕಲಾದ ಆಟೋಮೊಬೈಲ್ ಅಂಗಡಿ!

ನೋಡುನೋಡುತ್ತಿದ್ದಂತೆ ಸುಟ್ಟು ಕರಕಲಾದ ಆಟೋಮೊಬೈಲ್ ಅಂಗಡಿ!

ಬೆಂಗಳೂರು, ಏ. 29, ನ್ಯೂಸ್ ಎಕ್ಸ್ ಪ್ರೆಸ್:  ಆಟೊ ಮೊಬೈಲ್​ ಅಂಗಡಿಯಲ್ಲಿಆಕಸ್ಮಿಕ ಅಗ್ನಿಅವಘಡ ಸಂಭವಿಸಿದರ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಸುಬ್ರಮಣ್ಯನಗರದ ಮಿಲ್ಕ್ ಕಾಲೋನಿಯಲ್ಲಿ ಕಂಡುಬಂದಿದೆ. ಗಾಯಿತ್ರಿ ಆಟೊ ಮೊಬೈಲ್​ ಅಂಗಡಿ ಸಂಪೂರ್ಣ ಭಸ್ಮವಾಗಿದ್ದು, ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಕೊಂಡಿರಬಹುದೆಂದು ಶಂಕಿಸಲಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಮುಂದಾಗಿದ್ದು, 10ಕ್ಕೂ ಹೆಚ್ಚಿನ ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ. ಸದ್ಯಕ್ಕೆ ಸುಬ್ರಮಣ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಈ ಅವಘಡದಿಂದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ್ದು, ಅಕ್ಕ ಪಕ್ಕದ ಕಟ್ಟಡಗಳಿಗೆ ಬೆಂಕಿ ತಗುಲದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈ ಗೊಳ್ಳಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos