ನವದೆಹಲಿ, ಅ. 16 : ನಿವೃತ್ತಿ ಅಂಚಿನಲ್ಲಿರುವ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯಿ ಅವರು ಅಯೋಧ್ಯೆಯ ಬಾಬರಿ ಮಸೀದಿ ವಿವಾದ ಸಂಬಂಧ ಮಹತ್ವದ ತೀರ್ಪು ನಿವೃತ್ತಿಯಾಗುವ ಮೊದಲೇ ಘೋಷಿಸುವ ನಿಟ್ಟಿನಲ್ಲಿ ಅಧಿಕೃತ ವಿದೇಶಿ ಪ್ರವಾಸವನ್ನು ರದ್ದುಪಡಿಸಲು ನಿರ್ಧರಿಸಿದ್ದಾರೆ ಎಂದು ವರದಿಯೊಂದು ತಿಳಿಸಿದೆ.
ಅಕ್ಟೋಬರ್ 16ರಂದೇ ಅಯೋಧ್ಯೆ ಪ್ರಕರಣದ ವಾದ, ಪ್ರತಿವಾದ ಅಂತ್ಯಗೊಳಿಸಲು ಈಗಾಗಲೇ ಸ್ಪಷ್ಟ ನಿರ್ದೇಶನ ನೀಡಿರುವ ಸುಪ್ರೀಂಕೋರ್ಟ್ ಸಿಜೆಐ, ಅಯೋಧ್ಯೆ ವಿವಾದ ಕುರಿತ ಅಂತಿಮ ತೀರ್ಪು ಬರೆಯಲು ಸಮಯಾವಕಾಶ ಸಾಕಾಗಲಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.