ಆಯುಷ್ಮಾನ್ ಮೋದಿಯವರ ಕನಸಿನ ಕೂಸು

ಆಯುಷ್ಮಾನ್ ಮೋದಿಯವರ ಕನಸಿನ ಕೂಸು

ಹೊಸಕೋಟೆ: ಆಯುಷ್ಮಾನ್ ಭಾರತ್ ಯೋಜನೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನ ಕೂಸಾಗಿದ್ದು, ಬಡವರಿಗೆ ಗುಣಮಟ್ಟದ ಆರೋಗ್ಯ ಸೇವೆ ಉಚಿತವಾಗಿ ಲಭ್ಯವಾಗಲೆಂಬ ದೃಷ್ಟಿಯಿಂದ ಜಾರಿಗೆ ತರಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.

ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹೆತ್ತಕ್ಕಿ ಗ್ರಾಮದಲ್ಲಿ ಗುರುವಾರ 1 ಸಾವಿರ ಹಿಂದುಳಿದ ವರ್ಗದ ಬಡವ ಕುಟುಂಬಕ್ಕೆ ಉಚಿತವಾಗಿ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ಗಳನ್ನು ವಿತರಿಸಿ ಮಾತನಾಡಿದರು.

ಸರಕಾರಿ ಮತ್ತು ಸರಕಾರದಿಂದ ನೊಂದಾಯಿಸಲ್ಪಟ್ಟ ಖಾಸಗಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವ ಬಡವರಿಗೂ ಉಚಿತವಾಗಿ ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಾಗಲೆಂಬ ದೃಷ್ಟಿಯಿಂದ ಚಿಕಿತ್ಸೆ ಪಡೆಯಬಹುದಾಗಿದೆ. ನಗರ ಸೇರಿದಂತೆ ಗ್ರಾಮೀಣ ಭಾಗಕ್ಕೂ ಉಚಿತವಾಗಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ

ದೇಶದ 10ಕೋಟಿ ಬಡ ಕುಟುಂಬಗಳಿಗೆ ವರದಾನ ಆಗಲಿದೆ. ಈ ಯೋಜನೆಯಿಂದ ವಾರ್ಷಿಕ ಪ್ರತೀ ಕುಟುಂಬ 5 ಲಕ್ಷ ರೂಗಳ ವಿಮೆ ಪಡೆಯಬಹುದಾಗಿದೆ. ನಗರ ಸೇರಿದಂತೆ ಗ್ರಾಮೀಣ ಭಾಗಕ್ಕೂ ಉಚಿತವಾಗಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.

 

ಫ್ರೆಶ್ ನ್ಯೂಸ್

Latest Posts

Featured Videos