ಶಾಸಕ ಬಿ.ನಾಗೇಂದ್ರ ಪೊಲೀಸ್ ವಶಕ್ಕೆ.!

ಶಾಸಕ ಬಿ.ನಾಗೇಂದ್ರ ಪೊಲೀಸ್ ವಶಕ್ಕೆ.!

ಬೆಂಗಳೂರು, . 29, ನ್ಯೂಸ್ ಎಕ್ಸ್ ಪ್ರೆಸ್: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರರನ್ನ ಕೋರ್ಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಮ ಗಣಿಗಾರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟೀಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಶಕ್ಕೆ ಪಡೆಯುವಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಈ ಹಿನ್ನೆಯಲ್ಲಿ ನಾಗೇಂದ್ರರನ್ನ ಕೋರ್ಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ವಿಚಾರಣೆ ವೇಳೆ ನಾಗೇಂದ್ರ ಗೈರಾಗಿದ್ದರು. ಇದರಿಂದ ಗರಂ ಆಗಿದ್ದ ಕೋರ್ಟ್ ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆ ನಾಗೇಂದ್ರ ಜಾಮೀನು ರಹಿತ ವಾರಂಟ್ ರಿಕಾಲ್ ಮಾಡಿಸಿಕೊಳ್ಳಲು ಕೋರ್ಟ್ ಗೆ ಹಾಜರಾದಾಗ ಕೋರ್ಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos