ಬಿಎಸ್ಎಫ್ ನೇಮಕಾತಿ

ಬಿಎಸ್ಎಫ್ ನೇಮಕಾತಿ

ಬೆಂಗಳೂರು, . 20, ನ್ಯೂಸ್ ಎಕ್ಸ್ ಪ್ರೆಸ್: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್ಎಫ್) ನೇಮಕಾತಿ 1072 ಹೆಡ್ ಕಾನ್ಸ್‌ ಟೇಬಲ್ ಹುದ್ದೆಗಳನ್ನು ಭರ್ತಿ ಮಾಡವುದಾಗಿ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಕಟಣೆ ಹೊರಡಿಸಿದೆ.

ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 14 ರಿಂದ ಜೂನ್ 12,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಮೆಟ್ರಿಕ್ಯುಲೇಷನ್ / ಪಿಯುಸಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ನಿಂದ ಹೊಂದಿರುವ ಮತ್ತು ಹುದ್ದೆಗೆ ಸಂಬಂಧಪಟ್ಟಂತೆ ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಹೆಸರು: ಹೆಡ್ ಕಾನ್ಸ್‌ ಟೇಬಲ್ (ರೇಡಿಯೋ ಆಪರೇಟರ್)300, ಹೆಡ್ ಕಾನ್ಸ್‌ ಟೇಬಲ್ (ರೇಡಿಯೋ ಮೆಕ್ಯಾನಿಕ್ ) 772

ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/-ರಿಂದ 81,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಮೆಡಿಕಲ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

 

ಫ್ರೆಶ್ ನ್ಯೂಸ್

Latest Posts

Featured Videos