ನಾಲಾಯಕ್ ಮುಖ್ಯಮಂತ್ರಿ ಎಂದು ವಾಗ್ದಾಳಿ ಮಾಡಿದ: ಬಿ.ವೈ.ವಿಜಯೇಂದ್ರ

ನಾಲಾಯಕ್ ಮುಖ್ಯಮಂತ್ರಿ ಎಂದು ವಾಗ್ದಾಳಿ ಮಾಡಿದ: ಬಿ.ವೈ.ವಿಜಯೇಂದ್ರ

ಮೈಸೂರು: ಮಹಿಳೆಯರ ಮೇಲಿನ ದೌರ್ಜನ್ಯ, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಗಾಂಧಿಚೌಕದಲ್ಲಿ ಜಮಾಯಿಸಿದ ನೂರಾರು ಪ್ರತಿಭಟನಕಾರರು, ಇನ್ನೂ ಈ ಸಂದರ್ಭದಲ್ಲಿ ವಿಜಯೇಂದ್ರ ಮಾತನಾಡಿದರು, ‘ಕಳೆದ ಮೂರು ದಿನದಿಂದ ರಾಜ್ಯದಲ್ಲಿ 8 ಹತ್ಯೆಗಳು ನಡೆದಿದ್ದರೂ ಕಾಂಗ್ರೆಸ್ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸರ್ಕಾರ ಬಂದಾಗಿನಿಂದಲೂ ರಾಜ್ಯಕ್ಕೆ ದರಿದ್ರ ಅಂಟಿಕೊಂಡಿದೆ. ಹೀಗಾಗಿಯೇ ಬರ ಬಂದಿದೆ, ಅಲ್ಪಸಂಖ್ಯಾತರ ತುಷ್ಟೀಕರಣ ನೀತಿ ಅನುಸರಿಸಿದೆ. ಹೆಣ್ಣು ಮಕ್ಕಳಿಗೆ ಅಭದ್ರತೆ ಕಾಡುತ್ತಿದೆ’ ಎಂದು ದೂರಿದರು.

‘ನೇಹಾ ಪೋಷಕರಿಗೆ ಮುಖ್ಯಮಂತ್ರಿ ಸಾಂತ್ವನ ಹೇಳಲಿಲ್ಲ. ವೈಯಕ್ತಿಕ ಕಾರಣಕ್ಕೆ ಪ್ರಕರಣ ನಡೆದಿದೆಯೆಂದು ಹಗುರವಾಗಿ ಮಾತನಾಡಿದರು. ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಆಗ, ರಾಜ್ಯದಲ್ಲಿ ಇಂಥ ಹತ್ಯೆಗಳು ಮರುಕಳಿಸದಂತೆ ಕ್ರಮವಹಿಸಲು ಸಾಧ್ಯವಾಗುತ್ತದೆ. ಕಾನೂನು ಸುವ್ಯವಸ್ಥೆ ಹದಗೆಡಿಸಿರುವ ಮುಖ್ಯಮಂತ್ರಿ ಅವರೇ ಹೊಣೆ ಹೊರಬೇಕು. ನಾಡಿನ ತಾಯಂದಿರ ಮೇಲೆ ಗೌರವ ಇದ್ದರೆ, ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

‘ಪ್ರಧಾನಿ ನಾಲಾಯಕ್ ಅನ್ನುವ ಸಿದ್ದರಾಮಯ್ಯ ಅವರಿಗೆ ರಾಜ್ಯದಲ್ಲಿ 28 ಲೋಕಸಭಾ ಸ್ಥಾನಗಳನ್ನು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಜನರು ಪಾಠ ಕಲಿಸಲಿದ್ದಾರೆ. ಕೊಲೆಗಡುಕರಿಗೆ ರಕ್ಷಣೆ ನೀಡುತ್ತಿರುವ ಹೊಣೆಗೇಡಿ, ನಾಲಾಯಕ್ ಮುಖ್ಯಮಂತ್ರಿ, ಗೃಹ ಸಚಿವರನ್ನು ಮನೆಗೆ ಕಳುಹಿಸಲಿದ್ದಾರೆ’ ಎಂದು ಹೇಳಿದರು.

‘ಚುನಾವಣೆಗಳು ಬರುತ್ತವೆ ಹೋಗುತ್ತವೆ. ಹೆಣ್ಣು ಮಕ್ಕಳ ಗೌರವ ಉಳಿಸಲು ಬಿಜೆಪಿ ಪ್ರತಿಯೊಬ್ಬ ಕಾರ್ಯಕರ್ತ ನ್ಯಾಯ ಸಿಗುವವರೆಗೂ ಹೋರಾಟ ನಡೆಸಲಿದ್ದಾನೆ. ನಾವು ರಾಜಕೀಯ ಮಾಡುತ್ತಿಲ್ಲ. ಮಹಿಳೆಯರ ಗೌರವಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.‌

 

ಫ್ರೆಶ್ ನ್ಯೂಸ್

Latest Posts

Featured Videos